ಮಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡು ಹರಿದು ಬಂದಿದೆ.
ಇಂದು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದಿದ್ದಾರೆ. ಈ ವರ್ಷದ ಕೊನೆಯ ದಿನವಾದ ಇಂದು ಭಕ್ತರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲೇ ವಾಸ್ತವ್ಯ ಹೂಡಲಿದ್ದು, ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲೇ ಹೊಸ ವರ್ಷ ಕಳೆಯಲು ಸಜ್ಜಾಗಿದ್ದಾರೆ
ರಾಜ್ಯವಲ್ಲದೇ, ಪಕ್ಕದ ಆಂಧ್ರ, ತೆಲಂಗಾಣ, ತಮಿಳುನಾಡು ಸೇರಿದಂತೆ ದೇಶದ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದಾರೆ. ಮಂಜುನಾಥನ ಸನ್ನಿಧಿಯಲ್ಲಿ ಹೊಸ ವರ್ಷ ಆಚರಿಸಲು ಎಲ್ಲರೂ ಸಜ್ಜಾಗಿ ನಿಂತಿದ್ದಾರೆ.








