ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯಿಂದಾಗಿ ಅಬಕಾರಿ ಇಲಾಖೆ ಭರ್ಜರಿ ಆದಾಯ ಹರಿದು ಬಂದಿದೆ. ಮಂಗಳವಾರ ಒಂದೇ ದಿನ ಕೆಎಸ್‌ಬಿಸಿಎಲ್‌ಗೆ ಬರೋಬ್ಬರಿ 308 ಕೋಟಿ ರೂ. ಆದಾಯ ಬಂದಿದೆ.
ಡಿ.31 ರ ಮಂಗಳವಾರ ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆಯ ಅವಧಿಯಲ್ಲಿ 308 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಬಾರಿ ಅಬಕಾರಿ ಇಲಾಖೆ 250 ಕೋಟಿ ರೂ. ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಗುರಿಯನ್ನೂ ಮೀರಿ ಈ ಬಾರಿ ಆದಾಯ ಹರಿದು ಬಂದಿದೆ.
ಹಿಂದಿನ ವರ್ಷ ಇದೇ ಅವಧಿಯಲ್ಲಿ 193 ಕೋಟಿ ರೂ. ಮದ್ಯ ಮಾರಾಟವಾಗಿತ್ತು. ಐಎಂಎಲ್- 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಬಂದಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಬಂದಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 308 ಕೋಟಿ ರೂ. ಆದಾಯ ಸಿಕ್ಕಿದೆ.
ಡಿ. 27ರ ಶುಕ್ರವಾರದಂದು ಕೂಡ ಭರ್ಜರಿಯಾಗಿ ಮದ್ಯ ಮಾರಾಟವಾಗಿದೆ. ಅಂದು 408.58 ಕೋಟಿ ರೂ. ಮದ್ಯ ಮಾರಾಟವಾಗಿದೆ.
ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು
ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...








