ದಾವಣಗೆರೆ: ಹೊಸ ವರ್ಷದ ಸಂಭ್ರಮದಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ನಗರದ ನೂತನ್ ಕಾಲೇಜ್ ಮುಂದೆ ಮಧ್ಯರಾತ್ರಿ 1 ಗಂಟೆಯ ವೇಳೆ ನಡೆದಿದೆ. ಅಪಘಾತದಲ್ಲಿ ಯುವಕ ಬಲಿಯಾಗಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿಟ್ಟುವಳ್ಳಿ ಹೊಸ ಬಡಾವಣೆಯ ಕಾರ್ತಿಕ್ (19) ಸಾವನ್ನಪ್ಪಿರುವ ಯುವಕ ಎಂದು ಗುರುತಿಸಲಾಗಿದೆ.
ಹೊಸ ವರ್ಷ ಸಂಭ್ರಮಾಚರಣೆಗೆ ಸ್ನೇಹಿತರ ಜೊತೆ ಯುವಕ ತೆರಳುತ್ತಿದ್ದ. ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾನೆ. ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
‘ರಾಹುಲ್ ಗಾಂಧಿಗೆ ರಾಹು ಕಾಲ ಬಂದಿದೆ’: ಕಾಂಗ್ರೆಸ್ ನಾಯಕನ ವಿರುದ್ಧ ಆರ್. ಅಶೋಕ್ ವ್ಯಂಗ್ಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರತಿಭಟನೆ ಹಾಗೂ ಚುನಾವಣಾ ಆಯೋಗದ ವಿರುದ್ಧದ ಆಕ್ಷೇಪಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವ್ಯಂಗ್ಯವಾಡಿದ್ದಾರೆ. ರಾಹುಲ್...








