ಬೆಂಗಳೂರು: ಹೊಸ ವರ್ಷಕ್ಕೆ (New Year) ಬೆಂಗಳೂರಿನ ಡಿಸಿಪಿ (DCP) ರ‍್ಯಾಂಕ್ ಅಧಿಕಾರಿಗಳಿಗೆ ಮೊಬೈಲ್(Mobile Phone) ಗಿಫ್ಟ್ ಸಿಕ್ಕಿದೆ.
ಹೊಸ ವರ್ಷಕ್ಕೆ ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ವಿಶೇಷ ಜಿಪಿಎಸ್ ಟೆಕ್ನಾಲಜಿ ಅಳವಡಿಸಿರುವ ಸ್ಯಾಮ್‌ಸಂಗ್ ಮೊಬೈಲ್ ಉಡುಗೊರೆಯಾಗಿ (Gift) ನೀಡಲಾಗಿದೆ.
ಜ. 1ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೊಸ ವರ್ಷದ ಅಂಗವಾಗಿ ಔತಣಕೂಟ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್ (Dayananda) ಫೋನ್ ವಿತರಿಸಿದ್ದಾರೆ. ಎಲ್ಲ ಡಿಸಿಪಿ ರ‍್ಯಾಂಕ್ ಅಧಿಕಾರಿಗಳು ಕಡ್ಡಾಯವಾಗಿ ಜಿಪಿಎಸ್ ಮೊಬೈಲ್ ಬಳಸಲು ಆದೇಶ ಹೊರಡಿಸಿದ್ದಾರೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








