ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಈಗಾಗಲೇ ಗಗನಕ್ಕೆ ಏರಿಕೆ ಕಂಡಿದೆ. ಈ ಮಧ್ಯೆ ನಿನ್ನೆಯಷ್ಟೇ ಸರ್ಕಾರವು ಬಸ್ ಟಿಕೆಟ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಹಾಲಿನ ದರ ಏರಿಕೆಗೆ (Milk Price Hike) ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ (K Venkatesh) ಸುಳಿವು ನೀಡಿದ್ದಾರೆ. ರೈತರು ಹಾಲಿನ ದರ ಏರಿಕೆ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜಾನುವಾರುಗಳಿಗೆ ನೀಡುವ ಆಹಾರ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದಾಗಿ ರೈತರು ತತ್ತರಿಸಿದ್ದಾರೆ. ಹೀಗಾಗಿ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಚರ್ಚೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ರೈತರ ಅನುಕೂಲಕ್ಕೆ ತಕ್ಕಂತೆ ಹಾಲಿನ ದರ ಏರಿಕೆ ಮಾಡುತ್ತೇವೆ. ಆದರೆ, ಎಷ್ಟು ಪ್ರಮಾಣದಲ್ಲಿ ಏರಿಕೆಯಾಗುತ್ತದೆ ಎಂಬುವುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...








