ಅನೇಕಲ್: ಮಗನೊಬ್ಬ ತನ್ನ ತಾಯಿಯನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರು (Bengaluru) ಹೊರವಲಯದ ಸೂರ್ಯಸಿಟಿ ಹತ್ತಿರದ ಹಳೆ ಚಂದಾಪುರದಲ್ಲಿ ಈ ಘಟನೆ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾಗಿರುವ ಮಹಿಳೆ. ರಮೇಶ್ (21) ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಮಗ.
ಈ ಕುಟುಂಬ ಚಿತ್ರದುರ್ಗ ಮೂಲದ ಚಳ್ಳಕೆರೆಯ ಚಿಕ್ಕಹಳ್ಳಿಯವರು. ಕೆಲವು ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬಂದಿದ್ದರು. ಆದರೆ, ಮಗ ಮಾತ್ರ ಕುಡಿದ ನಶೆಗೆ ಬಿದ್ದಿದ್ದ. ಹೀಗಾಗಿ ಪ್ರತಿ ದಿನ ತಾಯಿ ಜೊತೆ ಜಗಳ ಮಾಡುತ್ತಿದ್ದ. ಜ. 4ರಂದು ಕೂಡ ಗಲಾಟೆ ಆರಂಭಿಸಿದ್ದಾನೆ. ಅದು ವಿಕೋಪಕ್ಕೆ ತಿರುಗಿದ್ದು, ಮೊಬೈಲ್ ಚಾರ್ಜರ್ ವೈರ್ ನಿಂದ ತಾಯಿ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.
ಆನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಮತ್ತು ಬೆಂಗಳೂರು ಗ್ರಾಮಾಂತರ ಎಎಸ್ಪಿ ನಾಗೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








