ಬೆಂಗಳೂರು: ಬೆಂಗಳೂರಿನಲ್ಲಿ ಎಚ್ಎಂಪಿವಿ ಪ್ರಕರಣಗಳು ದಾಖಲಾಗಿದ್ದು, ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಗರದಲ್ಲಿ ಹೆಚ್ಎಂಪಿವಿಯಿಂದ ಸೋಂಕಿತವಾಗಿರುವ ಮಗುವಿನ ಅರೋಗ್ಯ ಸ್ಟೇಬಲ್ ಆಗಿದೆ. ಭೀತಿಗೊಳಗಾಗುವ ಸನ್ನಿವೇಶ ಇಲ್ಲ. ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.
ವೈರಸ್ ಚೀನಾದಲ್ಲಿ ಪತ್ತೆಯಾಗಿರುವ ಕಾರಣ ಜನರಲ್ಲಿ ಭಯ ಮನೆ ಮಾಡಿದೆ. ಆದರೆ ಯಾರೂ ಹೆದರುವ ಅಗತ್ಯವಿಲ್ಲ ಮತ್ತು ಧಾವಂತದಲ್ಲಿ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಕೇಂದ್ರ ಸರ್ಕಾರ ಮತ್ತು ಐಸಿಎಂಆರ್ ಇದುವರಗೆ ಮಾರ್ಗಸೂಚಿಗಳನ್ನು ಜಾರಿ ಮಾಡಿಲ್ಲ. ಅಧಿಕಾರಿಗಳೊಂದಿಗೆ ಮಾತನಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.








