ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾರ್ಟಿ ಪಾಲಿಟಿಕ್ಸ್ ಜೋರು ಸದ್ದು ಮಾಡುತ್ತಿದೆ. ಹೈಕಮಾಂಡ್ ಖಡಕ್ ಸೂಚನೆ ಮೇರೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆಯೋಜಿಸಿದ್ದ ಡಿನ್ನರ್ ಪಾರ್ಟಿ ರದ್ದಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈ ಬಗ್ಗೆ ಈಗ ಪ್ರತಿಕ್ರಿಯಿಸಿರುವ ಪರಮೇಶ್ವರ್, ಭೋಜನಕೂಟ ರದ್ದಾಗಿಲ್ಲ, ಬದಲಾಗಿ ಮುಂದೂಡಲಾಗಿದೆ ಅಷ್ಟೇ ಎಂದು ಹೇಳಿದರು. ಡಿನ್ನರ್ ಪಾರ್ಟಿಗೆ ಹೈಕಮಾಂಡ್ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕಾರಣ ಮಾಡುವುದಾದರೆ, ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್
ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...








