ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ದುರುಳರ ಕೃತ್ಯವು ಅತ್ಯಂತ ಅಮಾನವೀಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಈ ಘಟನೆಯನ್ನು ಕಟುವಾಗಿ ಖಂಡಿಸಿದ್ದಾರೆ. ಈ ಬಗ್ಗೆ X’ನಲ್ಲಿ ಪೋಸ್ಟ್ ಮಾಡಿದ ಅವರು, ಗೋಮಾತೆಯನ್ನು ಪೂಜಿಸುವ ನಮಗೆಲ್ಲ ಈ ಕೃತ್ಯ ಅತ್ಯಂತ ಘಾಸಿಯುಂಟು ಮಾಡಿದೆ. ಸಂಕ್ರಾತಿಯ ಸಂದರ್ಭದಲ್ಲಿ ರಾಜ್ಯದ ರಾಜಧಾನಿಯಲ್ಲಿಯೇ ಇಂತಹ ಅಮಾನವೀಯ ಕೆಲಸ ಮಾಡಿರುವ ಪುಂಡರಿಗೆ ಈ ಸರ್ಕಾರದ ಬಗ್ಗೆ ಯಾವುದೇ ಭಯ ಇಲ್ಲದಂತೆ ಕಾಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








