ಹಾಸನ: ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಪತಿಯನ್ನು ಕೊಲೆ ಮಾಡಿಸಿರುವ ಘಟನೆ ನಡೆದಿದೆ.
ಈ ಘಟನೆ ಚನ್ನರಾಯಪಟ್ಟಣದ (Channarayapatna) ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ದೊಡ್ಡ ಆತಂಕಕ್ಕೆ ಕಾರಣವಾಗಿತ್ತು. ತನಿಖೆ ನಡೆಸಿರುವ ಪೊಲೀಸರಿಗೆ ಘಟನೆಯ ಹಿಂದೆ ಪತ್ನಿ (Wife) ಇರುವ ಮಾಹಿತಿ ಸಿಕ್ಕಿದೆ.
ಶುಕ್ರವಾರ ಮುಂಜಾನೆ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಗ್ರಾಮಸ್ಥರಿಂದ ಪತ್ನಿಯ ಅಕ್ರಮ ಸಂಬಂಧದ ವಿಷಯ ಪೊಲೀಸರಿಗೆ ಗೊತ್ತಾಗಿದೆ. ಆನಂತರ ಮೃತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
14 ವರ್ಷಗಳ ಹಿಂದೆ ನಂಜುಂಡೇಗೌಡ ಮದುವೆ ಮಾಡಿಕೊಂಡಿದ್ದರು. ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಜೊತೆ ಕುಂಬಾರಹಳ್ಳಿಯಲ್ಲಿ ಅವರು ವಾಸವಿದ್ದರು. ಮದುವೆಯಾಗಿ ಮೂರು ವರ್ಷದವರೆಗೂ ಪತಿ ಜೊತೆ ಚೆನ್ನಾಗಿದ್ದ ಮಹಿಳೆ, ನಂತರ ಎದುರು ಮನೆಯ ಅರುಣ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು.
ಅರುಣ್ ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಪತ್ನಿಯಿಂದ ದೂರವಿದ್ದ. ಅರುಣ್ ಹಾಗೂ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ನಂಜುಂಡೇಗೌಡ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು. ಆನಂತರ ರಾಜಿ ಪಂಚಾಯ್ತಿ ನಡೆಸಲಾಗಿತ್ತು. ಆದರೂ ಸಹಿಸಿಕೊಂಡು ನಂಜುಂಡೇಗೌಡ ಬದುಕು ಸಾಗಿಸುತ್ತಿದ್ದರು.
ಆದರೆ, ಇತ್ತೀಚೆಗೆ ಎರಡು ಬಾರಿ ನಂಜುಂಡೇಗೌಡರ ಮೇಲೆ ಅರುಣ್ ಮತ್ತು ಆತನ ಗ್ಯಾಂಗ್ ದಾಳಿ ಮಾಡಿತ್ತು. ಈ ವೇಳೆ ಅದೃಷ್ಟವಶಾತ್ ಬಚಾವಾಗಿದ್ದರು. ಮೂರನೇ ಬಾರಿ ಬ್ಯಾಡರಹಳ್ಳಿಗೆ ಹೋಗುವ ರಸ್ತೆ ಮಧ್ಯೆಯಿರುವ ಬಾರೆಯ ಬಳಿ ಮರದಪಟ್ಟಿಗೆ ಉದ್ದವಾದ 50ಕ್ಕೂ ಹೆಚ್ಚು ಮೊಳೆ ಹೊಡೆದು, ಹುಲ್ಲಿನಿಂದ ಮುಚ್ಚಿ ವಾಹನ ಪಂಚರ್ ಮಾಡಿದ್ದರು. ಪಂಚರ್ ಆಗುತ್ತಿದ್ದಂತೆ ವಾಹನದಿಂದ ಇಳಿಯುತ್ತಿದ್ದಂತೆ ಕಣ್ಣಿಗೆ ಖಾರದ ಪುಡಿ ಎರಚಿ ಲಾಂಗ್‌ನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಸದ್ಯ ಪೊಲೀಸರು ಪ್ರಕರಣ ಭೇದಿಸಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್
ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...








