ಬೆಂಗಳೂರು: ಬಿಎಂಟಿಸಿ (BMTC) ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಅಂಗಡಿಗಳಿಗೆ ಗುದ್ದಿದ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ 6.20ರ ಸುಮಾರಿಗೆ ಈ ಘಟನೆ ನಡೆದಿದೆ. ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ (Accident) ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಶಿರ್ಕೆ ಸರ್ಕಲ್ ನಿಂದ ನಾಗರಭಾವಿ ಮಾರ್ಗವಾಗಿ ಹೊರಟಿತ್ತು.
ಈ ಸಂದರ್ಭದಲ್ಲಿ ಬಸ್ ಅಪಘಾತವಾಗಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅವಘಡ ನಡೆದ ವೇಳೆ ಬಸ್ ನಲ್ಲಿ ಮೂವರಿದ್ದರು. ಆದರೆ, ಯಾವುದೇ ಗಾಯಗಳಾಗಿಲ್ಲ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.








