ಕೋಲ್ಕತ್ತಾ: ಇಡೀ ದೇಶದ ಆಕ್ರೋಶಕ್ಕೆ ಕಾರಣವಾಗಿದ್ದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ (RG Kar Medical College Hospital) ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಅಪರಾಧಿ ಸಂಜಯ್ ರಾಯ್‌ಗೆ (34) ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್ (Kolkata court) ತೀರ್ಪು ಪ್ರಕಟಿಸಿದೆ. ಲ್ಕತ್ತಾ (Kolkatta) ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ ಅನಿರ್ಬನ್ ದಾಸ್ (Anirban Das) ಅವರಿದ್ದ ಏಕಸದಸ್ಯ ಪೀಠ ಸಂಜಯ್ ರಾಯ್‌ನನ್ನು (Sanjay Roy) ದೋಷಿ ಎಂದು ಘೋಷಿಸಿ ತೀರ್ಪು ಪ್ರಕಟಿಸಿದ್ದಾರೆ.
ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ. ಆದರೆ, ಸಂತ್ರಸ್ತೆ ಪೋಷಕರು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿಲ್ಲ. ಹೀಗಾಗಿ ತಮಗೆ ಪರಿಹಾರ ಬೇಡ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನ್ಯಾಯಾಧೀಶರು ಶನಿವಾರ ತೀರ್ಪು ಪ್ರಕಟಿಸುತ್ತಿದ್ದಂತೆ ದೋಷಿಯಾಗಿರುವ ಸಂಜಯ್ ರಾವ್ ನಾನು ಅಮಾಯಕ. ಯಾವುದೇ ಕೃತ್ಯ ಎಸಗಿಲ್ಲ ಎಂದು ಹೇಳಿ ತನ್ನ ಮೇಲಿದ್ದ ಆರೋಪಗಳನ್ನು ನಿರಾಕರಿಸಿದ್ದ.








