ರಾಮನಗರ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance)ಸಿಬ್ಬಂದಿಗಳ ಕಿರುಕುಳ ಇತ್ತೀಚೆಗೆ ಹೆಚ್ಚಾಗಿದ್ದು, ಬಡವರು ಹೈರಾಣಾಗಿರುವ ಘಟನೆಗಳು ಆಗಾಗ ನಡೆಯುತ್ತಿದ್ದವು. ಈಗ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪದಡಿ ಖಾಸಗಿ ಫೈನಾನ್ಸ್ ಕಂಪನಿಯ ಬ್ರಾಂಚ್ ಮ್ಯಾನೇಜರ್ ನನ್ನು (Branch Manager) ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಕೋನಮುದ್ದನಹಳ್ಳಿ ಗ್ರಾಮದಲ್ಲಿ ಸಾಲಗಾರರಿಗೆ ಬ್ರಾಂಚ್ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಸಾಲ ಕಟ್ಟುವಂತೆ ಅವಾಚ್ಯ ಶಬ್ದ ಬಳಕೆ ಮಾಡಿ ಬೆದರಿಕೆ ಹಾಕಿದ್ದಾರೆಂದು ಸಾಲಗಾರರು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಬಿಡದಿಯ ಖಾಸಗಿ ಫೈನಾನ್ಸ್ ಕಂಪನಿಯ ಬ್ರಾಂಚ್ ಮ್ಯಾನೇಜರ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.








