ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗದಲ್ಲಿನ ಸೀನಿಯರ್ ಕರೆಸ್ಪಾಂಡೆಂಟ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.
ವಿದ್ಯಾರ್ಹತೆ: ಪತ್ರಿಕೋದ್ಯಮ, ಸಮೂಹ ಮಾಧ್ಯಮ ಅಥವಾ ಇನ್ನಿತರ ಸಂಬಂಧಿತ ವಿಭಾಗದಲ್ಲಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪದವಿ ಹೊಂದಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾದೇಶಿಕ ಭಾಷೆ ಹಿಡಿತದ ಜೊತೆಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆ ಜ್ಞಾನವಿರಬೇಕು. ಹಾಗೇ ಸಂಬಂಧಿಸಿದ ಕ್ಷೇತ್ರದಲ್ಲಿ 5 ವರ್ಷ ಕಾರ್ಯಾನುಭವವಿರಬೇಕು.
ವೇತನ: 80,000/- 1,25,000/-
ವಯೋಮಿತಿ: ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆ:ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು applications.prasarbharati.org ಇಲ್ಲಿ ಸಲ್ಲಿಕೆ ಮಾಡಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಜನವರಿ 31 ಕಡೆಯ ದಿನವಾಗಿದ್ದು, ಈ ಹುದ್ದೆಯನ್ನು ಎರಡು ವರ್ಷದ ಗುತ್ತಿಗೆ ಅವಧಿ ಮೇರೆಗೆ ನೇಮಕ ಮಾಡಲಾಗುವುದು.
ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು prasarbharati.gov.in ಇಲ್ಲಿಗೆ ಭೇಟಿ ನೀಡಬಹುದು








