ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆರೂರು ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರ-2 ಸಿನಿಮಾ ತಂಡವು ಅರಣ್ಯ ನಿಯಮಾವಳಿಗಳನ್ನು ಉಲ್ಲಂಘಿಸಿ, ಬೆಂಕಿ ಹಚ್ಚಲಾಗಿದೆ ಮತ್ತು ಪಟಾಕಿ ಸಿಡಿಸಲಾಗಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ಅರಣ್ಯಾಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿ, ಚಿತ್ರತಂಡ ಚಿತ್ರೀಕರಣದ ವೇಳೆ ಯಾವುದೇ ರೀತಿಯ ಸ್ಫೋಟಕಗಳನ್ನು ಬಳಸಿದ್ದರೆ ಚಿತ್ರೀಕರಣವನ್ನು ಕೂಡಲೇ ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿರುತ್ತಾರೆ.
ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್
ಬೆಂಗಳೂರು ನಗರದಲ್ಲಿನ ಹೋಟೆಲ್ಗಳಲ್ಲಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...








