ಬೆಂಗಳೂರು : ಕೊರೊನಾ ವೈರಸ್ ವಿರುದ್ಧ ಹಗಲಿರುಳು ಹೋರಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೂ ಇದೀಗ ಕೊರೊನಾ ಸೋಂಕು ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ತಮ್ಮ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲೇ ತಂಗಿದ್ದಾರೆ.
ಹೌದು..! ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ಪಡೆಯ ವಾಹನವೊಂದರ ಚಾಲಕನಿಗೆ ಕೊರೊನಾ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸೋಂಕು ಟೆನ್ಷನ್ ಶುರುವಾಗಿದೆ.
ಇನ್ನು ಈಗಾಗಲೇ ಕೊರೊನಾ ಶಂಕಿತನ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. ಏತನ್ಮಧ್ಯೆ, ಸಿಎಂ ಯಡಿಯೂರಪ್ಪ ಅವರಿಗೂ ಸೋಂಕು ಭೀತಿ ಇರೋ ಕಾರಣದಿಂದಾಗಿ ಮನೆಯಲ್ಲೇ ತಂಗಿದ್ದಾರೆ. ಆದ್ರೆ ಸಿಎಂ ಅವರ ಅಧಿಕೃತ ಕಾರ್ಯಕ್ರಮಗಳು ರದ್ದಾಗಿಲ್ಲವಾದರೂ, ಕೆಲ ತಾಂತ್ರಿಕ ಕಾರಣಗಳಿಂದ ಇಂದು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದ ಜನಪ್ರತಿನಿಧಿಗಳ ಕಾರ್ಯಕ್ರಮ ರದ್ದಾಗಿದೆ.








