ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಭೀಕರ ಅಪಘಾತ (Yellapur Accident) ನಡೆದಿದ್ದು, 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ತರಕಾರಿ ತುಂಬಿದ ಲಾರಿ ಪಲ್ಟಿಯಾದ ಪರಿಣಾಮ ಈ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸುಮಾರು 17 ಜನ ಈ ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಸಾವನ್ನಪ್ಪಿದವರೆಲ್ಲ ಹಾವೇರಿ (Haveri) ಜಿಲ್ಲೆಯ ಸವಣೂರು ಮೂಲದವರು ಎನ್ನಲಾಗಿದೆ. ತರಕಾರಿ ತುಂಬಿದ್ದ ಹಾವೇರಿಯಿಂದ ಅಂಕೋಲದ ಕಡೆ ಹೊರಟಿತ್ತು. ವೇಗ ಹಾಗೂ ಬೆಳಗಿನ ಮಂಜಿನಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








