ಮುಂಬಯಿ: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ (Champions Trophy 2025) ಪಾಕಿಸ್ತಾನ್ ದ ನೇತೃತ್ವದಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದೆ. ಟೂರ್ನಿಯ ಉದ್ಘಾಟನಾ ಸಮಾರಂಭ ಪಾಕ್ ನಲ್ಲೇ ನಡೆಯುತ್ತಿದ್ದು, ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ.
ಉದ್ಘಾಟನಾ ಪಂದ್ಯಕ್ಕೆ ಭಾರತೀಯ ತಂಡದ ನಾಯಕ ಹೋಗುತ್ತಾರಾ? ಎಂಬ ಪ್ರಶ್ನೆ ಎದ್ದಿತ್ತು. ಸದ್ಯ ಬಿಸಿಸಿಐ ಈ ವಿಷಯಕ್ಕೆ ತೆರೆ ಎಳೆದಿದೆ. ನಾಯಕನ ಭೇಟಿ ಮತ್ತು ಫೋಟೋಶೂಟ್‌ಗಾಗಿ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಗೌರವ್ ಗುಪ್ತ ಹೇಳಿದ್ದಾರೆ.
ಈಗಾಗಲೇ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪಾಕಿಸ್ತಾನ್ ಕ್ಕೆ ಕಳುಹಿಸದಿರಲು ಬಿಸಿಸಿಐ ಒಪ್ಪಿಗೆ








