ರಾಜ್ಯದಲ್ಲಿ ಫೈನಾನ್ಸ್ ಕಿರುಕುಳದ ಸುದ್ದಿ ಹೆಚ್ಚಾಗುತ್ತಿದ್ದಂತೆ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಮಾಡುವುದನ್ನು ಪ್ರಶ್ನಿಸಿ, ಬ್ಯಾಂಕ್‌ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಈಗ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿರುವ ಸುದ್ದಿ ತಿಳಿದುಬಂದಿದೆ.
ವಿಜಯ್ ಮಲ್ಯ, ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರವನ್ನು ಬ್ಯಾಂಕ್‌ಗಳಿಗೆ ನೀಡುವಂತೆ ನ್ಯಾಯಾಲಯದ ಮುಂದೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ, ವಿಜಯ್ ಮಲ್ಯ, ಸಾಲವಸೂಲಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ಮನವಿ ಮಾಡಿದ್ದಾರೆ.








