Karnataka High Court Recruitment 2025 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಸಿವಿಲ್ ನ್ಯಾಯಾಧೀಶರು
ಕರ್ತವ್ಯ ಸ್ಥಳ : ಕರ್ನಾಟಕ
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 158 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.
ವಯೋಮಾನ :
• ಇತರೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ1ರ ಅಭ್ಯರ್ಥಿಗಳು – ಗರಿಷ್ಠ 40 ವರ್ಷ
ವಯೋಮಿತಿ ಸಡಿಲಿಕೆ : ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 77,840 ರಿಂದ ರೂ. 1,36,520 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಹಾಗೂ ಕಂಪ್ಯೂಟರ್ ಜ್ಞಾನದ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ನಿಗದಿತ ಪರೀಕ್ಷಾ ಶುಲ್ಕದ ವಿವರ :
ಪೂರ್ವಭಾವಿ ಪರೀಕ್ಷೆ ಶುಲ್ಕ:
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1000
• ಪ.ಜಾತಿ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳು – ರೂ. 500
ಮುಖ್ಯ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದಲ್ಲಿ ಮುಖ್ಯ ಲಿಖಿತ ಪರೀಕ್ಷೆ ಶುಲ್ಕ –
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500
• ಪ.ಜಾತಿ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳು – ರೂ. 750
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಚ್ಚ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 12, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 12, 2025
Websites: https://recruitmenthck.kar.nic.in/hck/djr/home.php