ADVERTISEMENT
Tuesday, November 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮೈಸೂರು ಇತಿಹಾಸ ಮತ್ತು ಮಹಿಮೆ

Sri Chamundeshwari Temple History and Glory of Mysore

Shwetha by Shwetha
February 13, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಚಾಮುಂಡೇಶ್ವರಿ ದೇವಸ್ಥಾನವು ಸಾಂಪ್ರದಾಯಿಕ ಹಿಂದೂ ದೇವಾಲಯವಾಗಿದ್ದು, ಶಿವನ ಪತ್ನಿ ಪಾರ್ವತಿಯ ಅವತಾರವೆಂದು ನಂಬಲಾದ ಚಾಮುಂಡೇಶ್ವರಿ ದೇವಿಗೆ ಸಮರ್ಪಿತವಾಗಿದೆ. 18 ಮಹಾ ಶಕ್ತಿ ಪೀಠಗಳಲ್ಲಿ ಒಂದಾದ ಈ ಶಕ್ತಿ ಪೀಠವು ಭಕ್ತರ ಮನಸ್ಸಿನಲ್ಲಿ ಪವಿತ್ರ ಸ್ಥಾನವನ್ನು ಪಡೆದುಕೊಂಡಿದೆ

ಶ್ರೀ ಚಾಮುಂಡೇಶ್ವರಿ ಪೌರಾಣಿಕ ಹಿನ್ನಲೆಯುಳ್ಳ ದೇವತೆಯಾಗಿದ್ದು, ‘ದೇವಿ ಮಹಾತ್ಮೆ’ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟ ವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು ಬೆಟ್ಟಗಳ ಪೈಕಿ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು.

Related posts

ರೈತರ ಬರ ಪರಿಹಾರದ ಪತ್ರಗಳಿಗೆ ಕೇಂದ್ರದಿಂದ ಸ್ಪಂದನೆ ಇಲ್ಲ: ಡಿಸಿಎಂ ಪರಮೇಶ್ವರ್

ರೈತರ ಬರ ಪರಿಹಾರದ ಪತ್ರಗಳಿಗೆ ಕೇಂದ್ರದಿಂದ ಸ್ಪಂದನೆ ಇಲ್ಲ: ಡಿಸಿಎಂ ಪರಮೇಶ್ವರ್

November 24, 2026
ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಆರೋಪ: ರವಿ ಹಂಜ್ ವಿರುದ್ಧ ಸಿದ್ದಲಿಂಗ ಶ್ರೀಗಳ ಖಂಡನೆ

ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಆರೋಪ: ರವಿ ಹಂಜ್ ವಿರುದ್ಧ ಸಿದ್ದಲಿಂಗ ಶ್ರೀಗಳ ಖಂಡನೆ

November 24, 2026

ಹಿಂದೆ ಚಿಕ್ಕದೊಂದು ದೇವಸ್ಥಾನವಿದ್ದು, ಕ್ರಮೇಣ ಅಭಿವೃದ್ಧಿ ಹೊಂದಿ, ಹೆಚ್ಚಿನ ಪ್ರಾಮುಖ್ಯತೆ ಗಳಿಸಿ, ಶ್ರೀ ಚಾಮುಂಡೇಶ್ವರಿ ದೇವಸ್ಥಾನವೆಂಬ ದೊಡ್ಡ ದೇವಸ್ಥಾನವಾಗಿ ಅಭಿವೃದ್ಧಿಯಾಗಿದೆ ಎಂದು ತಿಳಿದುಬರುತ್ತದೆ. 1799 ರಲ್ಲಿ ಅಧಿಕಾರಕ್ಕೆ ಬಂದ ಮೈಸೂರು ಅರಸರು ಈ ದೇವಿ ಅರಾಧಕರಾಗಿದ್ದು, ಶ್ರಧ್ದಾ ಭಕ್ತಿಯಿಂದ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಅದನ್ನು ದೊಡ್ಡದಾದ ದೇವಾಲಯವನ್ನಾಗಿಸಿದ್ದಾರೆ. ಹಾಗೂ ಹೆಚ್ಚಿನ ಮಹತ್ವ ತಂದಿದ್ದಾರೆ.

ಚಾಮುಂಡಿಬೆಟ್ಟ ಚಾರಿತ್ರಿಕ ಹಿನ್ನಲೆಯಲ್ಲಿ ಹೊಯ್ಸಳ, ವಿಜಯನಗರ ಹಾಗೂ ಮೈಸೂರು ಅರಸರ ಕೊಡುಗೆಯಿದೆ. 12ನೇ ಶತಮಾನದ ಹೊಯ್ಸಳ ದೊರೆ ವಿಷ್ಣುವರ್ಧನ ಹಾಗೂ 17ನೇ ಶತಮಾನದ ವಿಜಯನಗರದ ಅರಸರ ಹಿನ್ನಲೆಯನ್ನು ಗುರುತಿಸಲಾಗಿದೆ. ಕ್ರಿ.ಶ. 1573 ರಲ್ಲಿ ಚಾಮರಾಜ ಒಡೆಯರು ದೇವಿಯನ್ನು ಪೂಜಿಸಲು ಹೋಗುತ್ತಿದ್ದಾಗ ಅವರಿಗೆ ಸಿಡಿಲು ಬಡಿದು ಅವರ ತಲೆಯ ಕೂದಲೆಲ್ಲಾ ಉದುರಿ ಹೋದವೆಂದು ಇತಿಹಾಸ ಹೇಳುತ್ತದೆ.

ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚೌಕಾಕೃತಿಯಲ್ಲಿ ನಿರ್ಮಾಣವಾಗಿದೆ. ದ್ರಾವಿಡ ಶೈಲಿಯಲ್ಲಿ ಕಟ್ಟಲಾಗಿರುವ ದೇವಸ್ಥಾನ, ಹೆಬ್ಬಾಗಿಲು, ಪ್ರವೇಶ ದ್ವಾರ, ನವರಂಗ, ಅಂತರಾಳ, ಗರ್ಭಗೃಹ, ಮತ್ತು ಪ್ರಾಕಾರಗಳನ್ನು ಹೊಂದಿದೆ. ಮಹಾದ್ವಾರದ ಮೇಲೆ ಸುಂದರವಾದ `ಗೋಪುರ` ಮತ್ತು ಗರ್ಭಗುಡಿಯ ಮೇಲೆ ‘ವಿಮಾನ’ ಶಿಖರಗಳಿವೆ. ಏಳು ಅಂತಸ್ತುಗಳ ಗೋಪುರ 19ನೇ ಶತಮಾನದಲ್ಲಿ ನಿರ್ಮಿತವಾಗಿದ್ದು ಪಿರಮಿಡ್ ಆಕಾರದಲ್ಲಿ ದ್ರಾವಿಡ ಶೈಲಿಯಲ್ಲಿ ನಿರ್ಮಿತವಾಗಿದೆ. ಶಿಖರದ ಮೇಲೆ ಏಳು ಚಿನ್ನದ ಲೇಪಿತ ಕಲಶಗಳಿವೆ.

ಗರ್ಭಗುಡಿಯಲ್ಲಿ ಮಹಿಷಮರ್ಧಿನಿಯಾದ ಚಾಮುಂಡೇಶ್ವರಿಯ ವಿಗ್ರಹವು ವಿರಾಜಮಾನವಾಗಿದೆ. ಎಂಟು ಭುಜಗಳನ್ನು ಹೊಂದಿರುವ ಚಾಮುಂಡೇಶ್ವರಿ ಇಲ್ಲಿ ಆಸೀನಳಾಗಿದ್ದಾಳೆ. ಈ ವಿಗ್ರಹವು ಬಹಳಷ್ಟು ಪುರಾತನವಾದದ್ದು. ಈ ಶಿಲಾಮೂರ್ತಿಯನ್ನು ಮಾರ್ಖಂಡೇಯ ಋಷಿಗಳು ಸ್ಥಾಪಿಸಿದರೆಂದು ಸ್ಥಳ ಪುರಾಣ ಹೇಳುತ್ತದೆ. 1827 ರಲ್ಲಿ ಮುಮ್ಮಡಿ ಕೃಷ್ಣರಾಜಒಡೆಯರು ಸಾವಿರ ವರ್ಷಕ್ಕೂ ಹಿಂದಿನ ಹಿನ್ನಲೆಯಿರುವ ದೇವಸ್ಥಾನದ ಜೀರ್ಣೋಧ್ದಾರ ಮಾಡಿ ಮಹಾದ್ವಾರದ ಮೇಲೆ ಈ ದೊಡ್ಡ ಗೋಪುರವನ್ನು ಕಟ್ಟಿಸಿದರು. ‘ಸಿಂಹವಾಹನ’ ಒಂದನ್ನು ಮರದಲ್ಲಿ ನಿರ್ಮಿಸಿ ಕೊಡುಗೆ ನೀಡಿದರು. ‘ಸಿಂಹ ವಾಹನ’ ವನ್ನು ರಥೋತ್ಸವ ಸಂಧರ್ಭದಲ್ಲಿ ಬಳಸಲಾಗುತ್ತಿದ್ದು ಅದರಲ್ಲಿ ದೇವಿಯ ಉತ್ಸವ ಮೂರ್ತಿಯನ್ನಿಟ್ಟು ರಥವನ್ನು ಎಳೆಯಲಾಗುತ್ತದೆ. ದ್ವಾರದ ಮೇಲ್ಭಾಗದಲ್ಲಿ ಸಣ್ಣದೊಂದು ಗಣಪತಿಯ ವಿಗ್ರಹವನ್ನು ನೋಡಬಹುದು. ದ್ವಾರದ ಬೃಹತ್ ಮರದ ಬಾಗಿಲನ್ನು ಬೆಳ್ಳಿಯ ತಗಡಿನಿಂದ ಹೊದಿಸಲಾಗಿದ್ದು, ಬೆಳ್ಳಿಯ ಬಾಗಿಲಿನ ಮೇಲೆ ದೇವಿಯ ಹಲವು ಸ್ವರೂಪಗಳನ್ನು ತೋರಲಾಗಿದೆ. ಮಹಾದ್ವಾರದ ಕೆಳ ಪಾರ್ಶ್ವದಲ್ಲಿ ಇಂದ್ರಾದಿ ಅಷ್ಠದಿಕ್ಪಾಲಕರ ವಿಗ್ರಹಗಳಿವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಮಹಾದ್ವಾರದಿಂದ ಒಳಗೆ ಹೋದರೆ ಬಲಭಾಗದಲ್ಲಿ ದಕ್ಷಿಣಾಭಿಮುಖವಾಗಿ ಗಣಪತಿಯ ಸಣ್ಣ ವಿಗ್ರಹವು ಸ್ಥಾಪಿಸಲ್ಪಟ್ಟಿದೆ. ವಿಘ್ನರಾಜನಿಗೆ ನಮಿಸಿ ಕೆಲವು ಕಲ್ಲಿನ ಮೆಟ್ಟಿಲುಗಳನ್ನು ಹತ್ತಿಹೋದರೆ ದೇವಸ್ಥಾನದ ಬಲಿಪೀಠ ಮತ್ತು ಧ್ವಜ ಸ್ಥಂಭ ಕಂಡುಬರುತ್ತದೆ. ಬಲಿಪೀಠದ ಮೇಲೆ ದೇವಿಯ ಪಾದಗಳನ್ನು ರೂಪಿಸಲಾಗಿದೆ. ಇವೆರಡರ ಮುಂಭಾಗದಲ್ಲಿ ಗರ್ಭಗುಡಿಗೆ ಅಭಿಮುಖವಾಗಿ ಸಣ್ಣದೊಂದು ನಂದಿ ವಿಗ್ರಹವಿದೆ. ಮಾತೆ ಚಾಮುಂಡಿಯನ್ನು ಅದು ವೀಕ್ಷಿಸುತ್ತಾ ಕುಳಿತಿದೆ. ಧ್ವಜ ಸ್ಥಂಭಕ್ಕೆ ಈಶಾನ್ಯದಲ್ಲಿ ಗೋಡೆಯ ಮೇಲೆ ಆಂಜನೇಯನ ವಿಗ್ರಹವಿದ್ದು ಅದಕ್ಕೂ ನಿತ್ಯ ಪೂಜೆ ಜರುಗುತ್ತದೆ. ಇಲ್ಲಿನ ಪ್ರವೇಶ ದ್ವಾರದಲ್ಲಿ ನಂದಿನಿ ಮತ್ತು ಕಮಲಿನಿ ಎಂಬ ದ್ವಾರಪಾಲಿಕೆಯರ ವಿಗ್ರಹಗಳು ದ್ವಾರದ ಎಡ ಮತ್ತು ಬಲ ಭಾಗದಲ್ಲಿವೆ.

ಗರ್ಭಗುಡಿಗೆ ಮುಂಚೆ ಇರುವ ಅತರಾಳದ ಎಡಭಾಗದಲ್ಲಿ ಮುದ್ದಾದ ಗಣಪಡತಿ ವಿಗ್ರಹ ಮತ್ತು ಬಲಭಾಗದಲ್ಲಿ ಭೈರವ ದೇವರ ವಿಗ್ರಹಗಳಿವೆ. ಭೈರವ ದೇವರ ಎಡಭಾಗದಲ್ಲಿ ಚಾಮುಂಡಿಯ ಪಂಚಲೋಹದ ಸುಂದರ ಉತ್ಸವ ಮೂರ್ತಿಯಿದೆ. ಗಣಪತಿಯ ಬಲಭಾಗದಲ್ಲಿ ಭಕ್ತನ ದಿರಿಸು ತೊಟ್ಟಿರುವ ಮುಮ್ಮಡಿ ಕೃಷ್ಣರಾಜ ಒಡೆಯರ ಆರು ಅಡಿ ಎತ್ತರದ ಸುಂದರ ಭಕ್ತ ವಿಗ್ರಹ ಕಾಣಬರುತ್ತದೆ. ಮಹಾರಾಜರು ತಮ್ಮ ಮೂವರು ಪತ್ನಿಯರೊಂದಿಗೆ ದೇವಿಗೆ ಕೈಮುಗಿದು ನಿಂತಿದ್ದಾರೆ. ಮಹಾರಾಜರ ಎಡಭಾಗಗಳಲ್ಲಿ ನಿಂತಿರುವವರೆಂದರೆ ರಮಾವಿಲಾಸ, ಲಕ್ಷ್ಮಿವಿಲಾಸ ಮತ್ತು ಕೃಷ್ಣವಿಲಾಸ ಮಹಾರಾಣಿಯರು. ಇವರುಗಳ ಶಿಲಾ ವಿಗ್ರಹಗಳ ಪಾದದ ಬಳಿಯ ಪೀಠದ ಮೇಲೆ ಇವರುಗಳ ಹೆಸರುಗಳನ್ನು ಕೆತ್ತಲಾಗಿದೆ.

ದೇವಾಲಯದ ಅರ್ಚಕರು ತಾಯಿ ಸ್ವರೂಪದ ಶಿಲಾ ಪ್ರತಿಮೆಯನ್ನು ಪ್ರತಿ ದಿನ ಅಲಂಕರಿಸಿ ಪೂಜೆ ಮಾಡುತ್ತಾರೆ. ಯದುಕುಲದ ದೇವತೆಯಾಗಿ ಬೆಳೆದು ಬಂದಿರುವ ಶ್ರೀ ಚಾಮುಂಡೇಶ್ವರಿಗೆ ಮೈಸೂರಿನ ಮಹಾರಾಜರುಗಳು ಹಲವಾರು ಬೆಲೆಬಾಳುವ ಹಾಗೂ ಅಪರೂಪವಾದ ಕಾಣಿಕೆಗಳನ್ನು ಶ್ರಧ್ಧಾಭಕ್ತಿಯಿಂದ ಒಪ್ಪಿಸಿದ್ದಾರೆ. ಈ ಶಕ್ತಿ ದೇವತೆಗೆ ಮಾನವ ಮತ್ತು ಪ್ರಾಣಿ ಬಲಿಯನ್ನು ಹಿಂದೆ ಕೊಡಲಾಗುತ್ತಿತ್ತು. ಆದರೆ 18ನೇ ಶತಮಾನದಲ್ಲಿ ಅದಕ್ಕೆ ಕಡಿವಾಣ ಬಿತ್ತು. ಈಗೇನಿದ್ದರೂ ಫಲಪುಷ್ಪಗಳ ಅರ್ಚನೆ, ಹಣ್ಣು ಹೂವು ಸಮರ್ಪಣೆ ಮಾತ್ರ ಮಾಡಲಾಗುತ್ತದೆ.

ಗರ್ಭಗುಡಿಯ ಮೇಲ್ಭಾಗದಲ್ಲಿ ಇನ್ನೊಂದು ಸಣ್ಣ ಗೋಪುರ ಕಂಡು ಬರುತ್ತದೆ. ದೇವಾಲಯದ ಹೊರಗಿನಿಂದ ‘ವಿಮಾನವನ್ನು’ ಕಾಣಬಹುದು. ಒಳ ಪಾರ್ಶ್ವದಲ್ಲಿರುವ ಪ್ರಾಕಾರದಲ್ಲಿ ಹಲವು ಸಣ್ಣ ಮೂರ್ತಿಗಳಿದ್ದು ಅಲ್ಲಿಯೂ ಪೂಜೆ ಪುನಸ್ಕಾರಗಳು ಜರುಗುತ್ತವೆ. ಪ್ರಾಕಾರದಲ್ಲಿ ಪ್ರದಕ್ಷಿಣೆ ಮುಗಿಸಿ ದೇವಸ್ಥಾನದಿಂದ ಹೊರಹೋಗುವಾಗ ಶ್ರೀ ಆಂಜನೇಯಸ್ವಾಮಿ ದೇವರ ದರ್ಶನವನ್ನು ಮಾಡಬಹುದಾಗಿದೆ.

ಚಾಮುಂಡೇಶ್ವರಿ ದೇವಾಲಯದ ಸಮಯ

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯ ಸಮಯ ಬೆಳಿಗ್ಗೆ 07.30 ರಿಂದ ಮಧ್ಯಾಹ್ನ 02.00 ರವರೆಗೆ; ಮಧ್ಯಾಹ್ನ 03.30 ರಿಂದ ಸಂಜೆ 06.00 ರವರೆಗೆ ಮತ್ತು ಸಂಜೆ 07.30 ರಿಂದ ರಾತ್ರಿ 09.00 ರವರೆಗೆ. ಪೂಜೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರಿಗೆ, ಈ ಸಮಯದಲ್ಲಿ ಭೇಟಿ ನೀಡುವುದು ಸೂಕ್ತವಾಗಿದೆ. ಅಭಿಷೇಕದ ಸಮಯ ಬೆಳಿಗ್ಗೆ 6.00 ರಿಂದ ಬೆಳಿಗ್ಗೆ 7.30 ರವರೆಗೆ ಮತ್ತು ಸಂಜೆ 6.00 ರಿಂದ ಸಂಜೆ 7.30 ರವರೆಗೆ. ಶುಕ್ರವಾರ ಬೆಳಿಗ್ಗೆ 5 ರಿಂದ ಬೆಳಿಗ್ಗೆ 6.30 ರವರೆಗೆ. ಪ್ರತಿದಿನ ಮಧ್ಯಾಹ್ನ 12.30 ರಿಂದ ಮಧ್ಯಾಹ್ನ 2.30 ರವರೆಗೆ ಭಕ್ತರಿಗೆ ಉಚಿತ ಊಟದ ವ್ಯವಸ್ಥೆ ಕೂಡ ಇದೆ.

ತಲುಪುವುದು ಹೇಗೆ?
ವಿಮಾನದ ಮೂಲಕ :

ಹತ್ತಿರದ ವಿಮಾನ ನಿಲ್ದಾಣ: ಮೈಸೂರು ವಿಮಾನ ನಿಲ್ದಾಣ (MYQ), ನಗರ ಕೇಂದ್ರದಿಂದ 12 ಕಿ.ಮೀ. ಪರ್ಯಾಯವಾಗಿ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 170 ಕಿ.ಮೀ ದೂರದಲ್ಲಿದೆ.

ಬಸ್ : ಮೈಸೂರು ನಗರ ಬಸ್ ನಿಲ್ದಾಣದಿಂದ ದೇವಾಲಯದ ಮೂಲ ಸ್ಥಳಕ್ಕೆ ನಿಯಮಿತವಾಗಿ ನಗರ ಬಸ್‌ಗಳು ಕಾರ್ಯನಿರ್ವಹಿಸುತ್ತವೆ. ನಂತರ ದೇವಾಲಯಕ್ಕೆ ಶಟಲ್ ಬಸ್ ಅಥವಾ ಪಾದಯಾತ್ರೆಯ ಮೂಲಕ ಹೋಗಬಹುದು.

ರೈಲಿನ ಮೂಲಕ :

ಹತ್ತಿರದ ರೈಲು ನಿಲ್ದಾಣ: ಮೈಸೂರು ಜಂಕ್ಷನ್ (MYS).

ShareTweetSendShare
Join us on:

Related Posts

ರೈತರ ಬರ ಪರಿಹಾರದ ಪತ್ರಗಳಿಗೆ ಕೇಂದ್ರದಿಂದ ಸ್ಪಂದನೆ ಇಲ್ಲ: ಡಿಸಿಎಂ ಪರಮೇಶ್ವರ್

ರೈತರ ಬರ ಪರಿಹಾರದ ಪತ್ರಗಳಿಗೆ ಕೇಂದ್ರದಿಂದ ಸ್ಪಂದನೆ ಇಲ್ಲ: ಡಿಸಿಎಂ ಪರಮೇಶ್ವರ್

by Shwetha
November 24, 2026
0

ಕರ್ನಾಟಕದ ರೈತರ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ...

ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಆರೋಪ: ರವಿ ಹಂಜ್ ವಿರುದ್ಧ ಸಿದ್ದಲಿಂಗ ಶ್ರೀಗಳ ಖಂಡನೆ

ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಆರೋಪ: ರವಿ ಹಂಜ್ ವಿರುದ್ಧ ಸಿದ್ದಲಿಂಗ ಶ್ರೀಗಳ ಖಂಡನೆ

by Shwetha
November 24, 2026
0

ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಪುಸ್ತಕ ಬರೆಯಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ್ ವಿರುದ್ಧ ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ತೀವ್ರ ಆಕ್ರೋಶ...

ಏಳು ದಿನವಲ್ಲ 70 ದಿನವಾದರೂ ಜಾಗ ಬಿಟ್ಟು ಕದಲಲ್ಲ: 7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ, ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಎದುರಾಯಿತು ದೊಡ್ಡ ಬಿಕ್ಕಟ್ಟು!

ಏಳು ದಿನವಲ್ಲ 70 ದಿನವಾದರೂ ಜಾಗ ಬಿಟ್ಟು ಕದಲಲ್ಲ: 7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ, ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಎದುರಾಯಿತು ದೊಡ್ಡ ಬಿಕ್ಕಟ್ಟು!

by Shwetha
November 24, 2026
0

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು ಆಶಾ ಕಾರ್ಯಕರ್ತೆಯರು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಯು ಇದೀಗ...

ದಲಿತರು ಶಾಸಕಿಯಾಗುವುದು ಅಪರಾಧವೇ?  ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

ಕಾಂಗ್ರೆಸ್‌ಗೆ ಬಿಗ್ ಶಾಕ್: ಸ್ವಪಕ್ಷದ ವಿರುದ್ಧವೇ ಸಿಡಿದೆದ್ದು ಶಾಸಕಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ!

by Shwetha
November 24, 2026
0

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಡೆಗೆ ಕಾಡಾನೆಗಳ ಗುಂಪನ್ನು ಅಟ್ಟಿರುವ ವಿಚಾರವು ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಗೆ ರಾಜಕೀಯ ಸ್ಫೋಟಕ್ಕೆ ಕಾರಣವಾಗಿದೆ....

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

720 ರನ್ ಪೇರಿಸಿದರೂ ದಕ್ಕದ ಗೆಲುವು: 15 ಓವರ್ ಬಾಕಿ ಇರುವಂತೆಯೇ ಕೈಚೆಲ್ಲಿ ಡ್ರಾ ಒಪ್ಪಿಕೊಂಡ ಶುಭ್‌ಮನ್ ಗಿಲ್ ಪಡೆ- ದಣಿವರಿಯದ ಸಿರಾಜ್ ಇಲ್ಲದೆ ಬಳಲಿ ಬೆಂಡಾದ ಬುಮ್ರಾ

by Shwetha
November 24, 2026
0

ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ನಿಯಮವಿದೆ. ನೀವು ಬ್ಯಾಟಿಂಗ್‌ನಲ್ಲಿ ಎಷ್ಟೇ ರನ್‌ಗಳ ಶಿಖರ ಪೇರಿಸಿದರೂ, ಎದುರಾಳಿ ತಂಡದ 20 ವಿಕೆಟ್‌ಗಳನ್ನು ಉರುಳಿಸದ ಹೊರತು ಪಂದ್ಯದಲ್ಲಿ ಗೆಲುವು ನಿಮ್ಮದಾಗುವುದಿಲ್ಲ. ನ್ಯೂಜಿಲೆಂಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram