ಬೆಂಗಳೂರು: ದೇಶಾದ್ಯಂತ ಐಸಿಎಸ್ಇ ಮಂಡಳಿಯ 10ನೇ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದೆ.
10ನೇ ತರಗತಿ ಪರೀಕ್ಷೆಯಲ್ಲಿ ಶೇ.99.33ರಷ್ಟು ಫಲಿತಾಂಶ ಬಂದಿದ್ದರೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.96.84ರಷ್ಟು ಫಲಿತಾಂಶ ಹೊರಬಿದ್ದಿದೆ.
ಐಸಿಎಸ್ಇ 10ನೇ ತರಗತಿ ಪರೀಕ್ಷೆಗೆ 2 ಲಕ್ಷದ 7902 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 2 ಲಕ್ಷದ 6 ಸಾವಿರದ 525 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಇನ್ನು ಐಎಸ್ಸಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.96.84ರಷ್ಟು ಫಲಿತಾಂಶ ಬಂದಿದೆ. ಈ ವರ್ಷ 88 ಸಾವಿರದ 409 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರ ಪೈಕಿ 85 ಸಾವಿರದ 611 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಸಿಐಎಸ್ಸಿಇ ಪರೀಕ್ಷಾ ಮಂಡಳಿ ತಿಳಿಸಿದೆ.
ಮಧ್ಯಾಹ್ನ 3 ಗಂಟೆಗೆ ವೆಬ್ಸೈನ್ನಲ್ಲಿ ಫಲಿತಾಂಶ ಪ್ರಕಟಗೊಂಡಿದ್ದು, ಎಸ್ಎಸ್ಎಂಸ್ ಮೂಲಕವೂ ಫಲಿತಾಂಶ ಪಡೆಯಬಹುದಾಗಿದೆ. ಮೊಬೈಲ್ ಸಂಖ್ಯೆ 09248082883ಗೆ ಎಸ್ಎಂಎಸ್ ಮಾಡಿದರೆ ಫಲಿತಾಂಶ ಸಿಗಲಿದೆ.
ಅಲ್ಲದೆ ಮಂಡಳಿಯ ವೆಬ್ಸೈಟ್ cisce.org, results.cisce.org. ಗೆ ಭೇಟಿ ನೀಡಿ ರಿಸಲ್ಟ್ ತಿಳಿಯಬಹುದಾಗಿದೆ.
ಡಿಜಿಟಲ್ ಮಾರ್ಕ್ಸ್ ಕಾರ್ಡ್ ಲಭ್ಯ
ಎಸ್ಸಿಎಸ್ಎ ಮಂಡಳಿಯ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳು ಸದ್ಯಕ್ಕೆ ಡಿಜಿಟಲ್ ಮಾರ್ಕ್ಸ್ ಕಾರ್ಡ್ ಗಳನ್ನು ಪಡೆಯಬಹುದಾಗಿದೆ.
ಕೊರೊನಾ ಅಂಟುವ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ಹಾಗೂ ಪಿಯುಸಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವುದನ್ನು ತಪ್ಪಿಸಲು ಮನೆಯಲ್ಲೇ ಡಿಜಿಟಿಲ್ ಸಹಿ ಹೊಂದಿದ ಅಂಕಪಟ್ಟಿಗಳನ್ನು ಪಡೆದು ಮುಂದಿನ ಶಿಕ್ಷಣಕ್ಕೆ ಪ್ರವೇಶ ಪಡೆಯಬಹುದಾಗಿದೆ.
ಫಲಿತಾಂಶದ ಬಗ್ಗೆ ಅನುಮಾನವಿದ್ದವರು ಜುಲೈ16ರೊಳಗೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಇದೂ ಕೂಡ ಮನೆಯಲ್ಲೇ ಕುಳಿತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಒಂದು ಪತ್ರಿಕೆಗೆ 1 ಸಾವಿರ ರೂ. ನಿಗಧಿ ಮಾಡಲಾಗಿದ್ದು, ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದಾಗಿದೆ.








