ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಸಿಹಿ ಸುದ್ದಿ ನೀಡಿದ್ದಾರೆ. ಅವರ ಪ್ರಕಾರ, ಮುಂದಿನ ತಿಂಗಳಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಸಕಾಲದಲ್ಲಿ ಬಿಡುಗಡೆ ಆಗಲಿದೆ. ಹಿಂದಿನ ಮಾದರಿಯಂತೆ, ಜಿಲ್ಲಾ ಉಪ ನಿರ್ದೇಶಕರ ಮೂಲಕ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಈ ಕುರಿತು ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ 15ನೇ ಕಂತಿನ ಹಣ ಜಮಾ ಆಗಿದೆ. ಕೆಲ ಜಿಲ್ಲೆಗಳಲ್ಲಿ ಮಾತ್ರ 15ನೇ ಕಂತಿನ ಹಣ ಬಿಡುಗಡೆಯಾಗಿಲ್ಲ. ಇನ್ನು 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ. ಈ ತಿಂಗಳ ಕೊನೆಯಲ್ಲಿ 15ನೇ ಮತ್ತು 16ನೇ ಕಂತಿನ ಹಣ ಜಮಾ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ಹಣ ವರ್ಗಾವಣೆಗೆ ಇನ್ನಷ್ಟು ಸುಲಭ ಪ್ರಕ್ರಿಯೆ ಕೈಗೊಳ್ಳುವ ಸಲುವಾಗಿ ತಡವಾಗಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈ ಬದಲಾವಣೆಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿನ ಹೊರೆ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.








