ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ತಳ್ಳಾಟದಲ್ಲಿ 10 ಮಹಿಳೆಯರು ಮತ್ತು ಮೂರು ಮಕ್ಕಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ.
ಮಹಾ ಕುಂಭಮೇಳಕ್ಕೆ ಬಂದ ವಿಶೇಷ ರೈಲುಗಳು ತಡವಾಗಿ ಬಂದಿದ್ದರಿಂದ ನಿಲ್ದಾಣದಲ್ಲಿ ಜನಸಾಗರ ಆಗಿ ಈ ಅಪಘಾತ ಆಯ್ತು. ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಘಟನೆಯಲ್ಲಿ ಸತ್ತವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು.
ಲೋಕ್ ನಾಯಕ್ ಜಯಪ್ರಕಾಶ್ (ಎಲ್ಎನ್ಜೆಪಿ) ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಾಧಿಕಾರಿ ಈ ಸಾವುಗಳನ್ನು ಖಚಿತಪಡಿಸಿದ್ದಾರೆ. ಈ ಅಪಘಾತದ ಬಗ್ಗೆ ರೈಲ್ವೇ ಇಲಾಖೆ ತನಿಖೆಗೆ ಆದೇಶಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
“ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ನಡೆದ ಘಟನೆ ನನ್ನನ್ನು ತೀವ್ರವಾಗಿ ಬೇಸರಗೊಳಿಸಿದೆ. ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಘಟನೆಗೆ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. “ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ನಡೆದ ಭಯಾನಕ ಘಟನೆಯಲ್ಲಿ ಜನರು ಸತ್ತಿರುವುದು ಬಹಳ ಬೇಸರದ ಸಂಗತಿ. ಸತ್ತವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ” ಎಂದು ರಾಜ್ನಾಥ್ ಸಿಂಗ್ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.








