ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶ್ರವಣ ಕುಮಾರನಂತೆ ಹಿರಿಯರ ಸೇವೆಗೆ ತೊಡಗಿ, ಕೊರೋನದಿಂದ ವೃದ್ಧರನ್ನು ರಕ್ಷಿಸಿ – ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

admin by admin
July 10, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Share on FacebookShare on TwitterShare on WhatsappShare on Telegram

ಕೋವಿಡ್ ನಿರ್ವಹಣೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ಡಾ.ಕೆ.ಸುಧಾಕರ್ ಸಭೆ

ಶ್ರವಣ ಕುಮಾರನಂತೆ ಹಿರಿಯರ ಸೇವೆಗೆ ತೊಡಗಿ, ಕೊರೋನದಿಂದ ವೃದ್ಧರನ್ನು ರಕ್ಷಿಸಿ – ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಬೆಂಗಳೂರು – ಜುಲೈ 10, 2020: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಹಿನ್ನೆಲೆಯಲ್ಲಿ ಹಾಸಿಗೆ ಹಂಚಿಕೆ ಸೇರಿದಂತೆ ಸಮರ್ಪಕ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಕುರಿತು ವರ್ಚುವಲ್ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಬೆಂಗಳೂರಿನಲ್ಲಿ ಸೋಂಕಿತರಿಗೆ ಹಾಸಿಗೆ ಕೊರತೆ ಆಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಮಾಧ್ಯಮ ಗೋಷ್ಠಿಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು ಹಾಗೂ ವಿಕ್ರಂ ಆಸ್ಪತ್ರೆಯ ಮುಖ್ಯಸ್ಥ ಡಾ.ಸತೀಶ್ ಉಪಸ್ಥಿತರಿದ್ದರು.

ಹಾಸಿಗೆಗಳ ಹಂಚಿಕೆಗೆ ಕೇಂದ್ರೀಕೃತ ವ್ಯವಸ್ಥೆ

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಹಂಚಿಕೆಗೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ ಬರಲಿದ್ದು ಎಲ್ಲವನ್ನೂ ವ್ಯವಸ್ಥಿತವಾಗಿ ನಿರ್ವಹಿಸಲಾಗುವುದು ಎಂದು ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರಿನ ಹಾಗೂ ರಾಜ್ಯದ ಕೋವಿಡ್ ಅಂಕಿಅಂಶಗಳನ್ನು ನೀಡಿದ ಸಚಿವರು, ಒಟ್ಟು 1442 ಪ್ರಕರಣಗಳು ಶುಕ್ರವಾರದಂದು ಬೆಂಗಳೂರಿನಲ್ಲಿ ದಾಖಲಾಗಿವೆ. ಮತ್ತು 26 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ನಗರದಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಶೇ.2% ರಷ್ಟು ಸೋಂಕಿತರಿಗೆ ಮಾತ್ರ ಐಸಿಯು ಅವಶ್ಯಕತೆ ಉಂಟಾಗಬಹುದು. ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಹಂಚಿಕೆ ಮಾಡಲು ಪಾರದರ್ಶಕ ಕೇಂದ್ರೀಕೃತ ವ್ಯವಸ್ಥೆ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವ ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆ ಇದೆ ಎಂದು ತಿಳಿಯಬಹುದು. ವೈಜ್ಞಾನಿಕ ಪದ್ಧತಿಯಲ್ಲಿ ಯಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ ಎಂದು ನಿರ್ಧರಿಸಿ ಹಾಸಿಗೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು. ಟೆಸ್ಟಿಂಗ್ ಹೆಚ್ಚಿಸುವ ನಿಟ್ಟಿನಲ್ಲಿ ಶನಿವಾರ ನಗರದಲ್ಲಿ 20000 ಆಂಟಿಜೆನ್ ಪರೀಕ್ಷೆ ಮಾಡಲಾಗುತ್ತಿದೆ, ಇನ್ನೂ 2 ಲಕ್ಷ ಟೆಸ್ಟ್ ಕಿಟ್ ಗಳಿಗೆ ಆರ್ಡರ್ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಕೋವಿಡ್ ಟೆಸ್ಟ್ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಶ್ರವಣ ಕುಮಾರನಂತೆ ಹಿರಿಯರ ರಕ್ಷಣೆಗೆ ನಿಲ್ಲಿ, ವೃದ್ಧರನ್ನು ಸೋಂಕಿನಿಂದ ಕಾಪಾಡಿ

ಕೊರೋನ ಸೋಂಕಿಗೆ ಹೆಚ್ಚು ಅಪಾಯದಲ್ಲಿರುವ ಹಿರಿಯರ ರಕ್ಷಣೆಗೆ ಆಧುನಿಕ ಶ್ರವಣಕುಮಾರರಂತೆ ತೊಡಗಿಸಿಕೊಳ್ಳಬೇಕು ಎಂದು ಸಚಿವರು ಯುವಕರಿಗೆ ಕರೆ ನೀಡಿದ್ದಾರೆ. ಶ್ರವಣಕುಮಾರ ವೃದ್ಧ ತಂದೆ ತಾಯಿಯರನ್ನು ಹೊತ್ತು ಕಾಲ್ನಡಿಗೆಯಲ್ಲೇ ತೀರ್ಥಯಾತ್ರೆ ಮಾಡಿಸಿ ಜನ್ಮ ಸಾರ್ಥಕ ಮಾಡಿಕೊಂಡ. ಇಂದು ನಾವೆಲ್ಲಾ ತ್ರೇತಾ ಯುಗದ ಶ್ರವಣ ಕುಮಾರನಂತೆ ಕಷ್ಟಪಡಬೇಕಾಗಿಲ್ಲ. ಹಿರಿಯರನ್ನು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಹೋಗದಂತೆ ಎಚ್ಚರ ವಹಿಸಿದರೆ ಅದೇ ನಾವು ಅವರಿಗೆ ಮಾಡುವ ಸೇವೆ. ಆದ್ದರಿಂದ ಯುವಕರಲ್ಲಿ ನಾನು ಮಾಡುವ ಮನವಿ ಏನಂದರೆ ದಯವಿಟ್ಟು ಮನೆಯಲ್ಲಿರುವ ಹಿರಿಯರನ್ನು ಮನೆಯಲ್ಲೇ ಇರುವಂತೆ ನೋಡಿಕೊಂಡು ಅವರನ್ನು ರಕ್ಷಿಸಿ. ಸೋಂಕಿನಿಂದ ಕಾಪಾಡಿ ಎಂದು ಸಚಿವರು ಹೇಳಿದರು.

Tags: bangalorecoronavirusCOVID-19Dr. K SudhakarkarnatakaViralcoronavirus
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram