ಬೆಳಗಾವಿಯಲ್ಲಿ ಮರಾಠಿ ಯುವಕರಿಂದ ಗೂಂಡಾಗಿರಿ ಮುಂದುವರೆದಿದ್ದು, ಕನ್ನಡ ಮಾತನಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಖಾನಾಪುರ ತಾಲ್ಲೂಕು ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಈ ಘಟನೆ ಫೆಬ್ರವರಿ 24, 2025ರಂದು ಜಾಂಬೋಟಿ ಕ್ರಾಸ್ ಬಳಿಯ ಹೊಟೇಲ್‌ನಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ನಿಡಗಲ್ಕರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದಕ್ಕೂ ಮುಂಚೆ, ಕನ್ನಡ ಮಾತನಾಡಿದ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರು ಹಲ್ಲೆ ನಡೆಸಿದ್ದರು. ಈ ಘಟನೆಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.








