DC Office Kodagu Recruitment 2025 – ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಉದ್ಯೋಗ ವಿವರಗಳು
ಇಲಾಖೆ ಹೆಸರು ಕೊಡಗು ಜಿಲ್ಲಾಧಿಕಾರಿಗಳ ಕಚೇರಿ
ಹುದ್ದೆಗಳ ಹೆಸರು ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ (Offline)
ಉದ್ಯೋಗ ಸ್ಥಳ – ಕೊಡಗು
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್/ ಬಿಸಿಎ/ ಎಂ.ಸಿ.ಎ. (ಸ್ಟ್ರೀಮ್ : ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೆಷನ್ ಸೈನ್ಸ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ & ಕಮ್ಯುನಿಕೇಶನ್ ಟೆಲಿಕಾಂ) ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವೇತನಶ್ರೇಣಿ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,053/- ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 24 ಫೆಬ್ರುವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05 ಮಾರ್ಚ್ 2025