ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಉಚಿತ ಅಕ್ಕಿಯನ್ನು ಒಟ್ಟಿಗೆ ವಿತರಿಸಲು ತೀರ್ಮಾನಿಸಿದೆ. ಈ ಕುರಿತು ವಿತರಕರಿಗೆ ಅಗತ್ಯ ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ 4 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯ ಅಕ್ಕಿ ವಿತರಿಸಲು ಒಪ್ಪಿಕೊಂಡಿದ್ದು, ಸರ್ಕಾರ ಪ್ರತಿ ಕೆಜಿಗೆ ₹22.5 ಪಾವತಿಸಬೇಕಾಗುತ್ತದೆ. ಇದಲ್ಲದೆ, ಸಾಗಣೆ ವೆಚ್ಚ ₹2.50 ಸೇರಿ ಒಟ್ಟು ₹25 ವೆಚ್ಚ ಆಗುತ್ತದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ತಕ್ಷಣದ ವಿತರಣಾ ವ್ಯವಸ್ಥೆ ಖಾತ್ರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.








