ಭಾರತೀಯ ಜನತಾ ಪಕ್ಷದ ಯುವ ಸಂಸದ ತೇಜಸ್ವಿ ಸೂರ್ಯ ಮತ್ತು ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಆರತಕ್ಷತೆ ಸಮಾರಂಭ ಬೆಂಗಳೂರು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ರಾಜಕೀಯ ನಾಯಕರು, ಕಲಾವಿದರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಿ ನವ ದಂಪತಿಗಳಿಗೆ ಶುಭಕೋರಿದ್ದಾರೆ.
ಮದುವೆ ಆರತಕ್ಷತೆ ಸಮಾರಂಭದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಕೆಂಪು ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದು, ತೇಜಸ್ವಿ ಸೂರ್ಯ ಬಂಗಾರದ ಬಣ್ಣದ ಶೇರ್ವಾನಿಯಲ್ಲಿ ಶೋಭಯಮಾನವಾಗಿ ಕಾಣಿಸಿಕೊಂಡಿದ್ದಾರೆ. ಈ ಸಂಭ್ರಮಕ್ಕೆ ಅವರ ಕುಟುಂಬದ ಸದಸ್ಯರು, ಹಿತೈಷಿಗಳು ಮತ್ತು ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ.
ಅರಮನೆ ಮೈದಾನದಲ್ಲಿ ಈ ಅದ್ದೂರಿ ಸಮಾರಂಭವನ್ನು ಆಯೋಜಿಸಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಶೇಷ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿದೆ. ರಾಜಕೀಯ ವಲಯದಿಂದಲೇ ಅಲ್ಲ, ಸಿನಿ ಜಗತ್ತಿನ ಅನೇಕ ಗಣ್ಯರು ಕೂಡ ಈ ಸಂಭ್ರಮಕ್ಕೆ ಸಾಕ್ಷಿಯಾದರು.