ರಾಜ್ಯದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ಹರಡುವುದು, ಅವುಗಳಿಂದ ಗಲಭೆಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಸರ್ಕಾರ ಈ ಕುರಿತು ತೀವ್ರ ಗಮನ ಹರಿಸಿದೆ.
ಈ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್, ವಿಧಾನ ಪರಿಷತ್ತಿನಲ್ಲಿ ಮಾತನಾಡಿ, ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ‘ಮಾನಿಟರ್ ವಿಭಾಗ’ ಸ್ಥಾಪನೆ ಮಾಡುವ ಯೋಜನೆ ಇದೆ ಎಂದು ತಿಳಿಸಿದ್ದಾರೆ. ಈ ವ್ಯವಸ್ಥೆಯ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾ ಇರಿಸಲಾಗುವುದು.
ಸುಳ್ಳು ಸುದ್ದಿಗಳಿಗೆ ತಡೆ – ಗೃಹ ಸಚಿವರ ಪ್ರಸ್ತಾವನೆ
ಡಾ. ಪರಮೇಶ್ವರ್ ಅವರ ಪ್ರಕಾರ, ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡುತ್ತಿವೆ. ಇದರಿಂದ ಸಮಾಜದಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಸಮಸ್ಯೆ ನಿಯಂತ್ರಿಸಲು ಪೊಲೀಸ್ ಇಲಾಖೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಪೊಲೀಸ್ ಇಲಾಖೆಗೆ ಸರ್ಕಾರದಿಂದ ಹೆಚ್ಚಿನ ಬೆಂಬಲ
ಸೋಶಿಯಲ್ ಮೀಡಿಯಾ ನಿಗಾವಹಿಸಲು ಪೊಲೀಸ್ ಇಲಾಖೆಗೆ ಸರ್ಕಾರ ಹೆಚ್ಚಿನ ಶಕ್ತಿ ನೀಡಬೇಕು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಈ ಹೊಸ ಕ್ರಮದಿಂದ ಅಕ್ರಮ ಚಟುವಟಿಕೆಗಳು ಕಡಿಮೆಯಾಗುವ ನಿರೀಕ್ಷೆ ಇದೆ.