ಸಾಕಷ್ಟು ಪರಿಶ್ರಮದ ಬಳಿಕವೂ ದೆಹಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಭದ್ರತೆಗಾಗಿ ಸೇನಾಪಡೆಗಳನ್ನು ನಿಯೋಜಿಸುವ ಅಗತ್ಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿರುವ ಅವರು, ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರವು ದೆಹಲಿ ಜನರಲ್ಲಿ ಭೀತಿಯನ್ನು ಹುಟ್ಟಿಸುತ್ತಿದೆ. ದೆಹಲಿ ಹಿಂಸಾಚಾರ ನಿಯಂತ್ರಿಸುವ ಸಂಬಂಧ ಪೊಲೀಸರು ವಿಫಲರಾಗಿದ್ದಾರೆ. ಪ್ರತಿಭಟನಾಕಾರರಿಂದ ಕೈತಪ್ಪಿಹೋಗಿರುವ ದೆಹಲಿಯನ್ನು ಮತ್ತೆ ಯತಾಸ್ಥಿತಿಗೆ ತರಲು ಸೇನಾಪಡೆಗಳನ್ನು ನಿಯೋಜಿಸುದು ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಹಿಂಸಾಚಾರ ಹತ್ತಿಕ್ಕಲು ಹಾಗೂ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ 144 ಸೆಕ್ಷನ್ ಜಾರಿಗೊಳಿಸಿ ಕಫ್ರ್ಯೂ ಹಾಕಲಾಗಿದೆ. ಉಳಿದ ಪ್ರದೇಶಗಳಲ್ಲೂ ಕಫ್ರ್ಯೂ ಜಾರಿಮಾಡುವ ಅಗತ್ಯವಿದೆ. ಭದ್ರತೆಗಾಗಿ ಸೇನಾ ಪಡೆಗಳ ನಿಯೋಜಿಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.








