ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) CET-2025ರ ಕನ್ನಡ ಭಾಷಾ ಪರೀಕ್ಷೆಯ ದಿನಾಂಕದಲ್ಲಿ ಬದಲಾವಣೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮೊದಲು 2025ರ ಏಪ್ರಿಲ್ 18 ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಅನ್ನು 2025ರ ಏಪ್ರಿಲ್ 15 (ಮಂಗಳವಾರ) ರಂದು ನಡೆಸಲು ನಿರ್ಧಾರ ಮಾಡಲಾಗಿದೆ.
ಈ ಕುರಿತು KEA ಪ್ರಕಟಣೆ ನೀಡಿದ್ದು, CET-2025ರ ಪ್ರಮುಖ ವಿಷಯಗಳ ಪರೀಕ್ಷಾ ದಿನಾಂಕಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ. ಮೊದಲೇ ನಿಗದಿಪಡಿಸಿರುವಂತೆ ಸಿಇಟಿ ಪರೀಕ್ಷೆ ಏಪ್ರಿಲ್ 16 ಮತ್ತು 17, 2025 ರಂದು ನಡೆಯಲಿದೆ. ಈ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು KEA ಸ್ಪಷ್ಟನೆ ನೀಡಿದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಪದವಿ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಗಳನ್ನು KEA ವೆಬ್ಸೈಟ್ನಲ್ಲಿ ಪರಿಶೀಲಿಸಲು ಸೂಚನೆ ನೀಡಲಾಗಿದೆ.