ಬೆಂಗಳೂರು ; ಕೊರೊನಾ ವಿಚಾರವಾಗಿ ಸರ್ಕಾರದ ವಿರುದ್ಧ 2000 ಕೋಟಿ ಅವ್ಯವಹಾರದ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಇದೀಗ ಟ್ವಿಟ್ಟರ್ ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಆರಂಭಿಸಿ ಸಮರ ಸಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ “ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ. ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೋ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿನಂತಿ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ #LekkaKodi ಹ್ಯಾಷ್ ಟ್ಯಾಗ್ ಹಾಕಿದ್ದಾರೆ .
ಅಲ್ಲದೆ ಈ ಟ್ವೀಟ್ ನೊಂದಿಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನನು ಕೇಳಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.