ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಕೆ. ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾವುದೇ ರಾಜೀನಾಮೆ ನೀಡಿಲ್ಲ. ನನ್ನ ಅಧ್ಯಕ್ಷೀಯ ಅವಧಿ ಪೂರ್ಣಗೊಂಡಿದೆ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಇನ್ನೂ ನಡೆದಿಲ್ಲ. ಇದರ ಬೆನ್ನಲ್ಲೇ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ, ಎಂದು ಹೇಳಿದರು.
ಅದೇ ಸಮಯದಲ್ಲಿ ಮುಂದಿನ ಅವಧಿಗೆ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಆಸಕ್ತಿಯಿಲ್ಲ ಎಂದೂ ಅವರು ತಿಳಿಸಿದರು. ಈ ಬಾರಿ ನಾನು ಚುನಾವಣಾ ರೇಸ್ನಲ್ಲಿಲ್ಲ. ಪಕ್ಷದಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಡೋದು ನನ್ನ ಅಭಿಪ್ರಾಯ. ಮುಂದಿನ ನಾಯಕತ್ವ ಏನು ತೀರ್ಮಾನಿಸಿತ್ತೋ ಅದನ್ನು ಗೌರವಿಸುತ್ತೇನೆ, ಎಂದು ಸ್ಪಷ್ಟಪಡಿಸಿದರು.
ಈ ಮೂಲಕ ಪಕ್ಷದೊಳಗೆ ಭವಿಷ್ಯದ ನಾಯಕರನ್ನು ತರಬೇತಿ ಮಾಡಬೇಕು ಎಂಬ ಉದ್ದೇಶದಿಂದಲೇ ಅಣ್ಣಾಮಲೈ ಈ ನಿರ್ಧಾರ ತೆಗೆದುಕೊಂಡಿರುವಂತೆ ತೋರುತ್ತದೆ.
![{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"435250766003211","type":"ugc"},{"id":"441845485021211","type":"ugc"},{"id":"289170894054211","type":"ugc"},{"id":"304699961364211","type":"ugc"}]}}](https://saakshatv.com/wp-content/uploads/2025/04/Picsart_25-04-10_20-03-13-565-750x500.jpg)







