ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವಂತೆ ಸಭೆ ಮೇಲೆ ಸಭೆ ನಡೆಸಿ, ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡುತ್ತಿದ್ದಾರೆ.
ಬಿಡುವಿಲ್ಲದೆ ಇಡೀ ದಿನ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರ ಕಚೇರಿಯ ಅಂಗರಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ವಯಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಕೊರಾನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಜಾಗ್ರತೆ ವಹಿಸುವಂತೆ ಬಿಎಸ್‍ವೈಗೆ ಸಲಹೆ ನೀಡಿದರು.
ಈ ವೇಳೆ ಯಡಿಯೂರಪ್ಪ ಅವರೂ ಕೂಡ ಕುಮಾರಸ್ವಾಮಿ ಅವರಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಫುಟ್ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್ಮ್ಯಾನ್ ಆಟವೇ ಅಸ್ತ್ರ..!
ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...








