ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆಂದು ಕಳೆದ ವಾರದಂತೆ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 05 ಗಂಟೆಯವರೆಗೆ ಕಂಪ್ಲೀಟ್ ಕರ್ಫ್ಯೂ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ನಿಯಮ ಮೀರಿ ವಾಹನಗಳು ರಸ್ತೆಗೆ ಇಳಿದರೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ. ಮುಲಾಜಿಲ್ಲದೆ ಕೇಸ್ ಹಾಕಿ ವಾಹನ ಸೀಜ್ ಮಾಡಲಾಗುವುದು ಎಂದು ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಕೊರೋನಾ ಸೋಂಕು ಸಮುದಾಯಕ್ಕೆ ಹರಡದಂತೆ ತಡೆಯುವ ನಿಟ್ಟಿನಲ್ಲಿ ವಾರದ ಆರು ದಿನ ಎಂದಿನಂತೆ ವಾಣಿಜ್ಯ ವಹಿವಾಟು ನಡೆಸಲು ಅನುಮತಿ ನೀಡಿದ್ರೆ, ಪ್ರತಿ ಶನಿವಾರ ರಾತ್ರಿ 08 ಗಂಟೆಯಿಂದ ಸೋಮವಾರ ಬೆಳಗ್ಗೆ 05 ಗಂಟೆಯವರೆಗೆ ಕಂಪ್ಲೀಟ್ ಕರ್ಫ್ಯೂ ಘೋಷಿಸಿದೆ. ಅಲ್ಲದೆ, ಭಾನುವಾರ ಸಾರ್ವಜನಿಕರು ಯಾರೂ ರಸ್ತೆಗೆ ಇಳಿಯದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ” ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 05 ಗಂಟೆಯ ವರೆಗೆ ಕಂಪ್ಲೀಟ್ ಕಪ್ರ್ಯೂ ಜಾರಿಯಲ್ಲಿರಲಿದ್ದು, ನಿಯಮ ಮೀರಿ ವಾಹನಗಳು ರಸ್ತೆಗೆ ಇಳಿದರೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ನಗರದ ಎಲ್ಲಾ ಮೇಲ್ಸೇತುವೆಗಳು ಬಂದ್ ಆಗಲಿವೆ. ಹೀಗಾಗಿ ಹಿಂದಿನ ಭಾನುವಾರದಂತೆಯೇ ನಾಳೆಯೂ ಸಹ ಸಾರ್ವಜನಿಕರು ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.








