UAS Dharwad Recruitment 2025 : ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ, ಶಿರಸಿ ಆವರಣದ ಗ್ರಂಥಾಲಯದಲ್ಲಿ ಅಗತ್ಯವಿರುವ ಗ್ರಂಥಾಲಯ ಸಹಾಯಕ ಹುದ್ದೆಯನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.
ಹುದ್ದೆ : ಗ್ರಂಥಾಲಯ ಸಹಾಯಕರು
ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ಶಿರಸಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಬ್ಯಾಚುಲರ್ ಆಫ್ ಲೈಬ್ರರಿ ಸೈನ್ಸ್/ ಬ್ಯಾಚುಲರ್ ಆಫ್ ಲೈಬ್ರರಿ & ಇನ್ಫಾರ್ಮೆಷನ ಸೈನ್ಸ್, ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್/ ಮಾಸ್ಟರ್ ಆಫ್ ಲೈಬ್ರರಿ & ಇನ್ಫಾರ್ಮೆಷನ ಸೈನ್ಸ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ : ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ದೃಢೀಕೃತ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ : ಡೀನ್ (ಅರಣ್ಯ), ಅರಣ್ಯ ಮಹಾವಿದ್ಯಾಲಯ, ಶಿರಸಿ ಕಾರ್ಯಾಲಯ.
ಸಂದರ್ಶನ ದಿನಾಂಕ :
ಸಂದರ್ಶನ ನಡೆಯುವ ದಿನಾಂಕ : ಮೇ 13, 2025, ಮುಂಜಾನೆ 11.00 ಗಂಟೆಗೆ








