ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ, ಘಟನಾ ಸ್ಥಳದಲ್ಲಿ ಬುರ್ಖಾ ಧರಿಸಿದ ಮಹಿಳೆಯರು ಕಾಣಿಸಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಹರಿದಾಡಿವೆ. ಈ ಕುರಿತು, ಮಾಜಿ ಕಾರ್ಪೊರೇಟರ್ ಮತ್ತು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ ಅವರು, “ಈ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ?” ಎಂಬ ಪ್ರಶ್ನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಉದ್ದೇಶಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ಗೆ ಸಂಬಂಧಿಸಿದಂತೆ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ, ಪೊಲೀಸರು ಇಬ್ಬರು ಬುರ್ಖಾ ಧರಿಸಿದ ಮಹಿಳೆಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅವರು ಆರೋಪಿಗಳ ಸಂಬಂಧಿಕರಾಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ . ಆದಾಗ್ಯೂ, ಈ ಮಹಿಳೆಯರನ್ನು ಬಂಧಿಸುವ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲದಿರುವುದರಿಂದ, ಶ್ವೇತಾ ಪೂಜಾರಿ ಅವರ ಪ್ರಶ್ನೆ ವಿವಾದಕ್ಕೆ ಕಾರಣವಾಗಿದೆ.
ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಅದೇ ಮಹಿಳೆಯರು ಕೊಲೆ ಆರೋಪಿಗಳನ್ನು ಕಾರ್ಗೆ ಹತ್ತಿಸಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು ಎಂದು ತಿಳಿದು ಬಂದಿದೆ.ಈ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆ ಮತ್ತು ಸಂಬಂಧಿತ ವಿಚಾರಣೆಗಳು ನ್ಯಾಯಸಮ್ಮತವಾಗಿ ನಡೆಯಬೇಕೆಂಬ ಒತ್ತಡ ಹೆಚ್ಚುತ್ತಿದೆ.








