ತಲಕಾಡು ಮೈಸೂರು ಜಿಲ್ಲೆಯ ಒಂದು ಪುರಾತನ ಪಟ್ಟಣ. ಕಾವೇರಿ ನದಿಯ ದಡದಲ್ಲಿರುವ ಈ ಸ್ಥಳವು ಒಂದು ಕಾಲದಲ್ಲಿ ಪ್ರಮುಖ ವಾಣಿಜ್ಯ ಮತ್ತು ಧಾರ್ಮಿಕ ಕೇಂದ್ರವಾಗಿತ್ತು.
ಎತ್ತ ನೋಡಿದರತ್ತ ಮರಳರಾಶಿ, ಗಗನಚುಂಬಿಸುವ೦ಥ ಮರಳಗುಡ್ಡೆಗಳು, ಊರು ತುಂಬ ಮರಳಿನದೇ ರಂಗವಲ್ಲಿ. ಗುಡಿ-ಗೋಪುರಗಳು, ಮನೆಮಠಗಳು, ಕಾಡು-ಮೇಡುಗಳು, ನಡೆವ ರಸ್ತೆ ಎಲ್ಲಕ್ಕೂ ಮರಳಿನದೇ ನಂಟು. ಇದು ತಲಕಾಡಿನ ಪರಿ. ಕಾಲಿಟ್ಟಲ್ಲಿ ಮರಳು ಕೈಚಾಚಿದಲ್ಲಿ ಮರಳು! ಇದು ತಲಕಾಡು ಇರುವ ರೀತಿ. ಇದರ ಹಿಂದೊಂದು ಶಾಪದ ಕಥೆ ಹೀಗಿದೆ. ಶ್ರೀರಂಗರಾಯ ವಿಜಯನಗರದ ಪ್ರತಿನಿಧಿಯಾಗಿ ಶ್ರೀರಂಗಪಟ್ಟಣದಲ್ಲಿ ಆಳುತ್ತಿದ್ದ ಕಾಲದಲ್ಲಿ ಆತನಿಗೆ ಬೆನ್ನುಫಣಿ ರೋಗ ಬರುತ್ತದೆ. ಅದರ ನಿವಾರಣೆಗಾಗಿ ಆತ ತನ್ನ ಪತ್ನಿ ಅಲಮೇಲಮ್ಮನ ಜೊತೆ ತಲಕಾಡಿನ ಶ್ರೀ ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಪೂಜೆಗಾಗಿ ಬರುತ್ತಾನೆ. ಆ ಸಂದರ್ಭದಲ್ಲಿ ರೋಗ ಉಲ್ಬಣಗೊಂಡು ಶ್ರೀರಂಗರಾಯ ತಲಕಾಡಿನಲ್ಲೇ ಸಾವಿಗೀಡಾಗುತ್ತಾನೆ. ಈ ಸಂದರ್ಭ ಉಪಯೋಗಿಸಿಕೊಂಡು ಮೈಸೂರಿನ ರಾಜಒಡೆಯರು ಶ್ರೀರಂಗಪಟ್ಟಣವನ್ನು ಆಕ್ರಮಿಸಿಕೊಳ್ಳುತ್ತಾರೆ. ಆಗ ಶ್ರೀರಂಗರಾಯನ ಪತ್ನಿ ಅಲಮೇಲಮ್ಮ ತಲಕಾಡಿನ ಪಕ್ಕದಲ್ಲಿರುವ ಮಾಲಂಗಿ ಗ್ರಾಮದಲ್ಲಿ ನೆಲೆಸುತ್ತಾಳೆ. ಆದರೆ ಅಮೂಲ್ಯವಾದ ಮುತ್ತಿನ ಮೂಗುತಿಯೊಂದು ಸೇರಿದಂತೆ ಎಲ್ಲಾ ಒಡವೆಗಳನ್ನು ಕಿತ್ತುಕೊಳ್ಳಲು ರಾಜಒಡೆಯರು ಪ್ರಯತ್ನಿಸಿದಾಗ ಕೋಪಗೊಂಡ ಅಲಮೇಲಮ್ಮ ತಲಕಾಡು ಮರಳಾಗಿ ಮಾಲಂಗಿ ಮಡುವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ ಎಂದು ಶಾಪ ಹಾಕಿ ಒಡವೆಗಳೊಡನೆ ಕಾವೇರಿ ನದಿಗೆ ಹಾರಿ ಪ್ರಾಣ ಬಿಡುತ್ತಾಳೆ. ತಲಕಾಡು ಪೌರಾಣಿಕವಾಗಿ, ಚಾರಿತ್ರಿಕವಾಗಿ, ಜಾನಪದವಾಗಿ, ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಬಹು ಮಹತ್ವದ ಸ್ಥಳ. ಸಿದ್ದಾರಣ್ಯಕ್ಷೇತ್ರ, ಗಜಾರಣ್ಯಕ್ಷೇತ್ರ, ತಲವನಪುರ, ರಾಜಪುರ ಮುಂತಾದ ಹೆಸರುಗಳಿಂದಲೂ ಪುರಾಣದಲ್ಲಿ, ಇತಿಹಾಸದಲ್ಲಿ ಕರೆಸಿಕೊಂಡಿರುವ ತಲಕಾಡು ಕ್ರಿ.ಶ.247ರ ಕಾಲದಲ್ಲೇ ಗಂಗರಸರ ಸಾಮ್ರಾಜ್ಯದ ರಾಜಧಾನಿಯಾಗಿ ಅಪಾರ ಕೀರ್ತಿ ಗಳಿಸಿ ಮೆರೆದ ಭವ್ಯ ನಾಡಾಗಿತ್ತು. ಗಂಗರಲ್ಲದೆ ಹೊಯ್ಸಳರು, ಚೋಳರು, ರಾಷ್ಟ್ರಕೂಟರು, ವಿಜಯನಗರದರಸರು, ಮೈಸೂರಿನ ಒಡೆಯರು ಮುಂತಾದ ರಾಜ ವಂಶಸ್ಥರ ನಾಡಾಗಿತ್ತು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಜ್ಯೋತಿಷ್ಯಶಾಸ್ತ್ರತಜ್ಞರು 8548998564
ಮಹಿಮೆ:
* ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಾಲಯವು ತಲಕಾಡಿನ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಇದು ಪಂಚಲಿಂಗ ಕ್ಷೇತ್ರಗಳಲ್ಲಿ ಒಂದಾಗಿದೆ. ಉಳಿದ ನಾಲ್ಕು ಲಿಂಗಗಳು ಪಾತಾಳೇಶ್ವರ, ಮರಳೇಶ್ವರ, ಅರ್ಕೇಶ್ವರ ಮತ್ತು ಮಲ್ಲಿಕಾರ್ಜುನ ದೇವಾಲಯಗಳಲ್ಲಿವೆ. ಈ ಐದು ಲಿಂಗಗಳ ದರ್ಶನವನ್ನು ಪಡೆಯುವುದರಿಂದ ಎಲ್ಲಾ ಪಾಪಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ.
* ಈ ದೇವಾಲಯವು ದ್ರಾವಿಡ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದೆ. ಗರ್ಭಗುಡಿಯ ಪ್ರವೇಶದ್ವಾರದಲ್ಲಿ ಇಬ್ಬರು ದೊಡ್ಡ ದ್ವಾರಪಾಲಕರ ವಿಗ್ರಹಗಳಿವೆ. ದೇವಾಲಯದ ಗೋಡೆಗಳ ಮೇಲೆ ಸುಂದರವಾದ ಕೆತ್ತನೆಗಳಿವೆ.
* ದೇವಾಲಯದ ಆವರಣದಲ್ಲಿ ಗಣೇಶ ಮತ್ತು ನಂದಿಯ ವಿಗ್ರಹಗಳಿವೆ. ಒಳಾಂಗಣದಲ್ಲಿ ದುರ್ಗಾ, ಕಾಳಿ, ನಟರಾಜ, ಭದ್ರಕಾಳಿ ಮತ್ತು ಶಾರದಾ ದೇವಿಯರ ವಿಗ್ರಹಗಳನ್ನು ಕಾಣಬಹುದು.
* ಪ್ರತಿ 12 ವರ್ಷಗಳಿಗೊಮ್ಮೆ ಇಲ್ಲಿ ಪಂಚಲಿಂಗ ದರ್ಶನ ಎಂಬ ವಿಶೇಷ ಉತ್ಸವ ನಡೆಯುತ್ತದೆ. ಈ ಸಮಯದಲ್ಲಿ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ.
ಹೀಗೆ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಾಲಯವು ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದ್ದು, ಅನೇಕ ಭಕ್ತರಿಗೆ ಪವಿತ್ರ ಸ್ಥಳವಾಗಿದೆ.








