ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ನಡೆಸಲಾಗಿರುವ ಕೆಸಿಇಟಿ-2025 (KCET-2025) ಪರೀಕ್ಷೆಯ ಫಲಿತಾಂಶವನ್ನು ಇಂದು, ಮೇ 24 ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಚಿವರು, ಇಂದು ಬೆಳಿಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ಇಂದು ತೆರೆ ಬೀಳಲಿದ್ದು, ಅವರು ಮಧ್ಯಾಹ್ನ 2 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ಆನ್ಲೈನ್ನಲ್ಲಿ ವೀಕ್ಷಿಸಬಹುದು.
ಫಲಿತಾಂಶ ವೀಕ್ಷಿಸಲು ಇಲ್ಲಿವೆ ವಿವರಗಳು:
ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು ಕೆಳಕಂಡ ಯಾವುದೇ ಒಂದು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು:
cetonline.karnataka.gov.in
kea.kar.nic.in
ಫಲಿತಾಂಶ ನೋಡುವ ವಿಧಾನ
1. ಅಧಿಕೃತ ಜಾಲತಾಣಕ್ಕೆ ಹೋಗಿ (cetonline.karnataka.gov.in)
2. ‘KCET 2025 Result’ ಅಥವಾ ‘ಕೆಸಿಇಟಿ ಫಲಿತಾಂಶ 2025’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ
3. ನಿಮ್ಮ ನೋಂದಣಿ ಸಂಖ್ಯೆ (Registration Number) ಹಾಗೂ ಇತರೆ ಅಗತ್ಯ ಮಾಹಿತಿಯನ್ನು ನಮೂದಿಸಿ
4. ನಂತರ ‘Submit’ ಬಟನ್ ಕ್ಲಿಕ್ ಮಾಡಿದರೆ ಫಲಿತಾಂಶ ತೆರೆಯುತ್ತದೆ
ಈ ಬಾರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆಗೆ ಹಾಜರಾಗಿದ್ದು, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಹಾಗೂ ಯುಜಿ ಕೋರ್ಸ್ಗಳಲ್ಲಿ ಪ್ರವೇಶ ಪಡೆಯವ ನಿರೀಕ್ಷೆಯಲ್ಲಿದ್ದಾರೆ.








