ಅಹ್ಮದಾಬಾದ್ : ಬಿಜೆಪಿ ಭದ್ರಕೋಟೆ ಗುಜರಾತ್ ನಲ್ಲಿ ಪಾಟಿದಾರ್ ಸಮುದಾಯಕ್ಕೆ ಸರಕಾರಿ ಉದ್ಯೋಗದಲ್ಲಿ ಹಾಗೂ ಕಾಲೇಜು ಪ್ರವೇಶಾತಿಯಲ್ಲಿ ಮೀಸಲಾತಿ ನೀಡಬೇಕೆಂದು ಬೃಹತ್ ಪ್ರತಿಭಟನೆ ನಡೆಸಿ ದೇಶದ ಗಮನ ಸೆಳೆದಿದ್ದ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
26ರ ಹರೆಯದ ಹಾರ್ದಿಕ್ ಪಟೇಲ್ರನ್ನು ತಕ್ಷಣವೇ ಜಾರಿಗೆ ಬರುವಂತೆ ಗುಜರಾತ್ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರನ್ನಾಗಿ ಮಾಡುವ ಪ್ರಸ್ತಾವಕ್ಕೆ ಕಾಂಗ್ರೆಸ್ ಅಧ್ಯಕ್ಷರು ಅನುಮತಿ ನೀಡಿದ್ದಾರೆ ಎಂದು ಪಕ್ಷದ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. 2015ರ ಪ್ರತಿಭಟನೆ ಬಳಿಕ 2019ರ ಮಾರ್ಚ್ 12ರಂದು ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಸದ್ಯ ಗುಜರಾತ್ ನಲ್ಲಿ ನೆಲಕಚ್ಚಿರುವ ಕಾಂಗ್ರೆಸ್ ಪಕ್ಷವನ್ನು ಬಡಿದೆಬ್ಬಿಸಬೇಕಾದ ಸವಾಲು ಕಾರ್ಯಾಧ್ಯಕ್ಷರಾಗಿ ನೇಮವಾಗಿರುವ ಪಟೇಲ್ ಎದುರಾಗಿದೆ.








