ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ, ಮಂಗಳವಾರದಿಂದ ಒಂದು ವಾರದ ಕಾಲ ಬೆಂಗಳೂರು, ಬೆಂಗಳೂರು ಗ್ರಾಮಾಂತರವನ್ನು ಲಾಕ್ ಡೌನ್ ಮಾಡಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಟ್ವೀಟ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕುಮಾರಸ್ವಾಮಿ ಟ್ವೀಟ್, ‘ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಒತ್ತಾಯಿಸುತ್ತೇನೆ.

ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.








