ಗುಜರಾತ್ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಭದ್ರತಾ ದೃಢತೆಯ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಷ್ಟ್ರದ ಭದ್ರತೆಗೆ ಬೆದರಿಕೆ ಉಂಟುಮಾಡಿದರೆ ಹೇಗೆ ನಿಭಾಯಿಸಬೇಕು ಎಂಬುದರ ಬಗ್ಗೆ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರು ದಾಳಿ ಮಾಡಿದಾಗ ಭಾರತ ಮೌನವಾಗಿ ಕುಳಿತುಕೊಳ್ಳಬಹುದೇ? ಮೋದಿ ಮೌನವಾಗಿ ಕುಳಿತುಕೊಳ್ಳಬಹುದೇ? ಎಂದು ಜನರನ್ನು ಪ್ರಶ್ನಿಸಿದ ಪ್ರಧಾನಿ, ದೇಶದ ಹೆಮ್ಮೆ ಮತ್ತು ಮಹಿಳೆಯರ ಗೌರವವನ್ನು ಕಾಪಾಡಲು ತೆಗೆದುಕೊಳ್ಳುವ ಕ್ರಮಗಳನ್ನು ಸಮರ್ಥಿಸಿಕೊಂಡರು
ನಮ್ಮ ಸಹೋದರಿಯರ ಸಿಂಧೂರ ಯಾರು ಅಳಿಸುತ್ತಾರೋ ಅವರಿಗೆ ಉಳಿಗಾಲವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ಮೋದಿ, ಇಂತಹ ಶಕ್ತಿಗಳಿಗೆ ಭಾರತ ತಕ್ಕ ಉತ್ತರ ನೀಡುವುದಾಗಿ ಹೇಳಿದರು.
ಅವರು ‘ಆಪರೇಷನ್ ಸಿಂಧೂರ’ ಎಂಬ ಹೆಸರಿನಲ್ಲಿ ಭಾರತ ನಡೆಸಿದ ಕಾರ್ಯಚಟುವಟಿಕೆ ಬಗ್ಗೆ ವಿವರಿಸುತ್ತಾ, ಈ ಆಪರೇಷನ್ ಅಡಿಯಲ್ಲಿ ಭಾರತದ ಭದ್ರತಾ ಪಡೆಗಳು 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ನಾಶಪಡಿಸಿದ್ದಾಗಿ ಹೇಳಿದ್ದಾರೆ. ಈ ಮೂಲಕ, ಭಾರತ ತನ್ನ ಪ್ರತಿ ದಾಳಿಗೆ ತಕ್ಕ ಉತ್ತರ ಕೊಡುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ಪಾಕಿಸ್ತಾನ ಮತ್ತು ಇತರ ಉಗ್ರಶಕ್ತಿಗಳಿಗೆ ನೀಡಿದೆ.








