MCC Bank Recruitment 2025 – Mangalore Catholic Cooperative Bank Recruitment 2025 : ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನಿ. ಮಂಗಳೂರು ಇಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಹಾಗೂ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಹಿರಿಯ ಸಹಾಯಕ, ಕಿರಿಯ ಸಹಾಯಕ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಹಿರಿಯ ಸಹಾಯಕ 2
ಕಿರಿಯ ಸಹಾಯಕ 8
ಶೈಕ್ಷಣಿಕ ಅರ್ಹತೆ : ಯಾವುದೇ ಪದವಿ ಹೊಂದಿರಬೇಕು (ಬಿಎಸ್ಸಿ/ ಬಿಎ/ ಬಿಕಾಂ/ ಎಂಕಾಂ/ ಬಿಇ/ ಬಿಬಿಎಮ್/ ಬಿಸಿಎ/ ಎಂಸಿಎ, ಇತ್ಯಾದಿ). ಕನ್ನಡದಲ್ಲಿ ವ್ಯವಹಾರ ಜ್ಞಾನ, ಸ್ಪಷ್ಟವಾಗಿ ಓದಲು ಮತ್ತು ಬರೆಯಲು ಬರಬೇಕು ಹಾಗೂ ಕಂಪ್ಯೂಟರ್ನಲ್ಲಿ ಅಗತ್ಯ ಪರಿಣತಿ ಹೊಂದಿರಬೇಕು.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ :
ಹಿರಿಯ ಸಹಾಯಕ 21,600 – 40,050
ಕಿರಿಯ ಸಹಾಯಕ 20,000 – 36,300
ಅನುಭವ : ಹಿರಿಯ ಸಹಾಯಕ ಹುದ್ದೆಗೆ ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವವಿರತಕ್ಕದ್ದು.
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಮಹಾಪ್ರಬಂಧಕರು, ಮಂಗಳೂರು ಕಥೋಲಿಕ್ ಕೋಆಪರೇಟಿವ್ ಬ್ಯಾಂಕ್ ನಿ., ಆಡಳಿತ ಕಛೇರಿ, ಎರಡನೇ ಮಹಡಿ, ಹಂಪನಕಟ್ಟ, ಮಂಗಳೂರು – 575001
ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ/ ಪ.ಪಂ./ ಪ್ರ1ರ ಅಭ್ಯರ್ಥಿಗಳು – ರೂ. 500
• ಉಳಿದ ಅಭ್ಯರ್ಥಿಗಳು – ರೂ. 1000
ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಮಂಗಳೂರು ಕಥೋಲಿಕ್ ಕೋಆಪರೇಟಿವ್ ಬ್ಯಾಂಕ್ ನಿ., ಇವರ ಹೆಸರಿಗೆ ಡಿಡಿ ಮುಖಾಂತರ ಪಾವತಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 26, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 09, 2025








