ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಲು ಕೋವಿಡ್-19 ಸೋಂಕು ಪತ್ತೆ ಪರೀಕ್ಷೆಯ ವರದಿಯಲ್ಲಿನ ವಿಳಂಬವೇ ಕಾರಣವಾಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಗಮನಹರಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಕೊರೊನಾ ಟೆಸ್ಟ್ ಗಾಗಿ ಒಂದು ಲಕ್ಷ ಕಿಟ್ ತರಿಸಿದ್ದೇವೆ ಎಂದು ಹೇಳುತ್ತಿದ್ದೀರಿ. ಆದರೆ ರಾಜ್ಯದಲ್ಲಿ ಕೊರೊನಾ ಟೆಸ್ಟ್ ವರದಿ ತುಂಬಾ ವಿಳಂಬವಾಗುತ್ತಿದೆ. ಹೀಗಾಗಿ ಇವತ್ತು ಬೆಳಿಗ್ಗೆ ಕೊರೊನಾ ಟೆಸ್ಟ್ ಮಾಡಿಸಿದರೇ ಸಂಜೆಗೆ ಫಲಿತಾಂಶವನ್ನು ಕೊಡುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇಲ್ಲವಾದಲ್ಲಿ ಟೆಸ್ಟ್ ಗೆ ಒಳಪಟ್ಟ ವ್ಯಕ್ತಿ ಬೇರೆ ಬೇರೆ ಕಡೆ ಓಡಾಡುವ ಮೂಲಕ ಸೋಂಕನ್ನು ಹರಡಿಸುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ತಕ್ಷಣ ಫಲಿತಾಂಶ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಹೆಚ್ ಡಿಕೆ ಮನವಿ ಮಾಡಿಕೊಂಡಿದ್ದಾರೆ.
COVID-19 ಟೆಸ್ಟ್ ಗಳ ಫಲಿತಾಂಶದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸರ್ಕಾರ ಈ ಕೂಡಲೇ ಗಮನ ಹರಿಸಬೇಕು. ಈ ಕುರಿತು ನನ್ನ ಸಲಹೆ. pic.twitter.com/GsCeGhnbiz
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 12, 2020








