ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಮಧುಕೇಶ್ವರ ದೇವಾಲಯ, ಬನವಾಸಿ ಇತಿಹಾಸ ಮತ್ತು ಮಹಿಮೆಯ ಅನಾವರಣ

Unveiling the history and glory of Sri Madhukeshwara Temple, Banavasi

Shwetha by Shwetha
June 23, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಮಧುಕೇಶ್ವರದೇವಾಲಯವುಉತ್ತರಕನ್ನಡ ಜಿಲ್ಲೆಯ ಶಿರಸಿತಾಲೂಕಿನ ಬನವಾಸಿಯಲ್ಲಿದೆ.ಸುಮಾರು 1500 ವರ್ಷದ ಹಿಂದೆ ಕದಂಬರು,ಚಾಲುಕ್ಯರು,ಹೊಯ್ಸಳರ ಕಾಲದಲ್ಲಿ ದೇವಾಲಯವನ್ನು ಕಟ್ಟಲಾಗಿದೆ.ಪ್ರಸಿದ್ಧ ಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಈ ದೇವಾಲಯವನ್ನು ನಿರ್ಮಿಸಿದನೆಂದು ನಂಬಲಾಗಿದೆ.ಪವಿತ್ರ ವರದಾ ನದಿಯು ದೇವಾಲಯದ ಎದುರಿಗೆ ಹರಿಯುತ್ತಿದೆ.ಶ್ರೀ ಮಧುಕೇಶ್ವರ ಇಲ್ಲಿನ ಆರಾಧ್ಯದೈವ.ದೇವಾಲಯವು ಕರ್ನಾಟಕದ ಏಳು ಮುಕ್ತಿ ಸ್ಥಳಗಳಲ್ಲೊಂದು ಎಂದು ಪ್ರಸಿದ್ಧವಾಗಿದೆ.

ಪೌರಾಣಿಕ ಐತಿಹ್ಯ

Related posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026

ಮಾರ್ಕಂಡೇಯ ಪುರಾಣದ ಕಥೆಯ ಪ್ರಕಾರ ಕೃತಯುಗದಲ್ಲಿ ಮಹಾವಿಷ್ಣುವಿನ ಕಿವಿಯಿಂದ ಮಧು, ಕೈಟಭರೆಂಬ ಇಬ್ಬರು ದೈತ್ಯರು ಉತ್ಪತ್ತಿಯಾಗುತ್ತಾರೆ.ಅವರು ಈಶ್ವರನನ್ನು ಕುರಿತು ತಪಸ್ಸು ಮಾಡಿ ವರ ಪಡೆದು ಅಜರಾಮರರಾಗುತ್ತಾರೆ.ಕ್ರಮೇಣ ಅವರಲ್ಲಿ ಗರ್ವ ಉಂಟಾಗಿ ಲೋಕ ಕಂಟಕರಾಗುತ್ತಾರೆ.ಭೂಲೋಕಗಳನ್ನೆಲ್ಲ ಜಯಿಸಿ ಬ್ರಹ್ಮನ ಕಾರ್ಯಕ್ಕೆ,ಶಿವನ ಕಾರ್ಯಕ್ಕೆ ತೊಂದರೆ ಉಂಟುಮಾಡುತ್ತಾರೆ.ಆಗ ಬ್ರಹ್ಮ ವಿಷ್ಣುವಿನಲ್ಲಿ ಮೊರೆಯಿಟ್ಟು ಈ ಲೋಕ ಕಂಟಕ ರಾಕ್ಷಸರನ್ನು ಸಂಹರಿಸಲು ಕೇಳಿಕೊಳ್ಳುತ್ತಾನೆ.ವಿಷ್ಣುವು ಸಮ್ಮತಿಸಿ ಮಧು,ಕೈಟಭರೊಂದಿಗೆ ಯುದ್ಧಕ್ಕೆ ಆಹ್ವಾನಿಸುತ್ತಾನೆ.ಅವರೊಡನೆ ಐದು ಸಹಸ್ರ ವರ್ಷಗಳವರೆಗೆ ಯುದ್ಧ ಮಾಡಿದರೂ ಸೋಲಿಸಲಾಗುವುದಿಲ್ಲ.ಕೊನೆಗೆ ವಿಷ್ಣು ಉಪಾಯದಿಂದ ಯೋಚಿಸಿ ವರವೇನಾದರೂ ಬೇಕಿದ್ದರೆ ಕೇಳಿ,ಕೊಡುತ್ತೇನೆ ಎಂದಾಗ ಮತಾಂಧರಾದ ದೈತ್ಯರು ನಾವೇ ನಿನಗೆ ವರ ಕೊಡುತ್ತೇವೆ ಕೇಳಿಕೋ ಎಂದರು.ಇದನ್ನೇ ಆಶಿಸಿದ್ದ ವಿಷ್ಣು ಹಸನ್ಮುಖದಿಂದ ಹಾಗಾದರೆ ನನ್ನಿಂದ ನೀವು ಹತರಾಗುವ ವರ ಕೊಡಿರೆಂದು ಕೇಳುತ್ತಾನೆ.ಈ ಮಾತನ್ನು ಕೇಳಿ ಗರಬಡಿದವರಂತೆ ಆಗಿ ಅಹಂಕಾರ ಅಳಿದು ಮಧು-ಕೈಟಭರು ತಾವಾಗೇ ಇಂಥ ಪ್ರಸಂಗ ತಂದುಕೊಂಡೆವಲ್ಲ ಎಂದು ಚಿಂತಿಸಿ,ಮರುಗಿ ನಮ್ಮನ್ನು ಸಂಹರಿಸಿ ನಮ್ಮ ಪ್ರತೀಕವಾಗಿ ಇಲ್ಲಿ ಈಶ್ವರಾಲಯ ನಿರ್ಮಿಸಬೇಕೆಂದು ಪ್ರಾರ್ಥಿಸುತ್ತಾರೆ.ಮಹಾವಿಷ್ಣು ಹಾಗೇ ಆಗಲೆಂದು ಅವರೀರ್ವರನ್ನು ಸಂಹರಿಸಿ ಬನವಾಸಿಯಲ್ಲಿ ಮಧುಕೇಶ್ವರ ದೇವಾಲಯವನ್ನು ಇಲ್ಲಿಂದ 15 ಕಿ.ಮೀ.ದೂರದಲ್ಲಿ ಕೈಟಭೇಶ್ವರಾಲಯವನ್ನು ನೆಲೆಗೊಳಿಸಿದನೆಂಬ ಪ್ರತೀತಿಯಿದೆ.ಈಗಲೂ ಬನವಾಸಿಯಲ್ಲಿ ಮಧುಕೇಶ್ವರ ದೇವಾಲಯ,ಸೊರಬ ತಾಲೂಕಿನ ಆನವಟ್ಟಿಯ ಸಮೀಪ ಕೋಟೆಪುರದಲ್ಲಿ ಕೈಟಭೇಶ್ವರ ದೇವಾಲಯವಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಮಧುಕೇಶ್ವರ ಲಿಂಗ

ಶ್ರೀ ಮಧುಕೇಶ್ವರ ಲಿಂಗವು 5.5 ಅಡಿ ಎತ್ತರವಿದ್ದು,ಲಿಂಗದ ಶಿಲೆಯು ಜೇನು ತುಪ್ಪ(ಮಧು)ದ ಬಣ್ಣದಲ್ಲಿದೆ.ಅಂತೆಯೇ ಮಧುಕೇಶ್ವರ ಲಿಂಗವೆಂದು ಹೆಸರು.ಇಂತಹ ಕಲ್ಲಿನ ಶಿವಲಿಂಗಗಳು ಅತಿವಿರಳ.

ಮಾಯಾದೇವಿ ನಾಟ್ಯಮಂಟ.

ಗುಡಿಯ ಮುಖಮಂಟಪದ ಮಧ್ಯದಲ್ಲಿ ನಾಟ್ಯಮಂಟಪವಿದೆ.ಮಮಕಾರ ರಾಜನ ಮಗಳಾದ ಮಾಯಾದೇವಿ ಶಿವನನ್ನೇ ಒಲಿಸಿಕೊಳ್ಳಬೇಕೆಂದು ನಾಟ್ಯಸೇವೆ ಮಾಡುತ್ತಿರುವಾಗ ಅಲ್ಲಮ ಪ್ರಭುವು ಮದ್ದಳೆಕಾರನಾಗಿ ಬಂದು ಮದ್ದಳೆ ನುಡಿಸಿ ಮಾಯೆಯನ್ನು ಸೋಲಿಸಿದನೆಂದು ಪ್ರಭುಲಿಂಗಲೀಲೆಯಲ್ಲಿ ಹೇಳಿದೆ.ಈ ಮಂಟಪದ ದುಂಡಗಿನ ನಾಲ್ಕು ಕಂಬಗಳಲ್ಲಿ ನಮ್ಮ ಪ್ರತಿಬಿಂಬವು ಏಕಕಾಲದಲ್ಲಿ ನೇರವಾಗಿ,ತಲೆ ಕೆಳಗಾಗಿಯೂ ಕಾಣುತ್ತದೆ.

ಕಲ್ಲು ಮಂಚ

ದೇವಾಲಯದ ದಕ್ಷಿಣ ಪಾರ್ಶ್ವದಲ್ಲಿರುವ ಕಲ್ಲಿನಮಂಚವು ಗ್ರೆನೈಟ್ ಶಿಲೆಯಿಂದ ಮಾಡಿದ್ದಾಗಿದೆ.ಇದು ಹತ್ತು ತುಂಡು ಕಲ್ಲಿನಿಂದ ಮಾಡಿದುದಾಗಿದೆ.ಇದು ಹೊಳಪಿನಿಂದ ಕೂಡಿದ್ದು ಇದರ ಮೇಲೆ ಶಾಸನಗಳನ್ನು ಕೆತ್ತಲಾಗಿದೆ.ಮಂಚದ ಮೇಲೆ ಗಿಳಿ,ಸಿಂಹಗಳು,ಆನೆಗಳು,ಛಾವಣಿಯ ಕಮಲಗಳನ್ನು ಕೆತ್ತಲಾಗಿದೆ.ಸೋಂದೆಯ ರಘುನಾಥ ನಾಯಕನು 1628 ರಲ್ಲಿ ಇದನ್ನು ಮಧುಕೇಶ್ವರನಿಗೆ ಅರ್ಪಿಸಿದನು.

ಗುಡಿಯ ಬಲಭಾಗಕ್ಕೆ ಅನನ್ಯವಾದ ಅರ್ಧಗಣಪತಿಯ ಮೂರ್ತಿಯಿದೆ.ಇದರ ಇನ್ನೊಂದು ಅರ್ಧಭಾಗ ವಾರಣಾಸಿಯಲ್ಲಿದೆಯೆಂದು ನಂಬಲಾಗಿದೆ.ಇದು ಅರ್ಧಾಂಗಿಯಿಲ್ಲದೇ ನಿಂತಿರುವ ಏಕದಂತನ ಬ್ರಹ್ಮಚರ್ಯವನ್ನು ಸಂಕೇತಿಸುತ್ತದೆ.

ನಂದಿ ವಿಗ್ರಹ

ನಾಟ್ಯಮಂಟಪದ ಎದುರು 7.5 ಅಡಿ ಎತ್ತರದ ಬೃಹತ್ ನಂದಿ ಇದೆ.ಇದು ಹಾನಗಲ್ ಕದಂಬರ ಕಾಲಕ್ಕೆ ಸೇರಿದ್ದಾಗಿದೆ.ಈ ನಂದಿಯು ಎಡಗಣ್ಣಿನಿಂದ ಎದುರಿಗೆ ಶಿವನನ್ನು ಬಲಗಣ್ಣಿನಿಂದ ಪಕ್ಕದಲ್ಲಿರುವ ಪಾರ್ವತಿ ಗುಡಿಯಲ್ಲಿರುವ ಪಾರ್ವತಿಯನ್ನು ನೋಡುತ್ತಿದೆ.ನಂದಿಯನ್ನು ಅತ್ಯಂತ ನುಣುಪಾದ ಬಳಪದ ಕಲ್ಲಿನಿಂದ ಮಾಡಲಾಗಿದೆ.

ಇತರ ಆಕರ್ಷಣೆಗಳು

ಮಧುಕೇಶ್ವರ ದೇವಾಲಯದ ಗರ್ಭಗುಡಿ ಶುಕನಾಸಿ,ಮುಖಮಂಟಪಗಳ ಸುತ್ತಲಿನ ಪ್ರದಕ್ಷಿಣಾ ಪಥದ ಎಡಗಡೆ ಇರುವ ಮಹಾವರಣಭಸ್ತಿಯಲ್ಲಿ ದೊಡ್ಡದಾದ ಅಷ್ಟದಿಕ್ಪಾಲಕರ ಎಂಟು ಮೂರ್ತಿ ಪತ್ನಿ ವಾಹನ ಸಮೇತರಾಗಿ ಆಯಾ ದಿಕ್ಕಿಗೆ ಸ್ಥಾನಕ್ಕೆ ಸರಿಯಾಗಿ ಪೂರ್ವಕ್ಕೆ ಇಂದ್ರ,ಆಗ್ನೇಯಕ್ಕೆ ಅಗ್ನಿ,ದಕ್ಷಿಣಕ್ಕೆ ಯಮ,ನೈಋತ್ಯಕ್ಕೆ ನಿರಋತಿ,ಪಶ್ಚಿಮಕ್ಕೆ ವರುಣ,ವಾಯುವ್ಯಕ್ಕೆ ವಾಯು,ಉತ್ತರಕ್ಕೆ ಕುಬೇರ,ಈಶಾನ್ಯಕ್ಕೆ ಈಶಾನಗಳನ್ನು ಪ್ರತ್ಯೇಕವಾಗಿ ಸ್ಥಾಪಿಸಿದ್ದಾರೆ.ಇದರ ನಡುವೆ ಅಲ್ಲಲ್ಲಿ ಪಾಂಡುರಂಗ,ಕಾಶಿ ವಿಶ್ವೇಶ್ವರ,ವರದೇಶ್ವರ,ಹಾವಳಿ ಮಧುಕೇಶ್ವರ,ಅಮೃತೇಶ್ವರ,ಕೇದಾರೇಶ್ವರ,ಸಪ್ತಮಾತೃಕೆ,ಚಿಂತಾಮಣಿಯರ ಪಟ್ಟಿ,ನರಸಿಂಹದೇವರ ಗುಡಿ,ವೆಂಕಟರಮಣ,ಅಮೃತಶಿಲೆಯ ರಾಮ-ಲಕ್ಷ್ಮಣ-ಸೀತೆ,ದತ್ತಪಾದುಕೆ,ದುಂಡಿರಾಜ,ಉಮಾಮಹೇಶ್ವರ,ಬಸಲಿಂಗೇಶ್ವರ,ಸೂರ್ಯ,೨ನೇ ಶತಮಾನದ ೫ ಹೆಡೆಯುಳ್ಳ ಆದಿಶೇಷ,ಕೇಶವ,ಉತ್ತರದ್ವಾರ,ಪೂರ್ವದ್ವಾರ,ಚೌಡೇಶ್ವರಿ,ದುರ್ಗೆ-ಪಾರ್ವತಿಯರ ಗುಡಿ,ಸಾಕ್ಷಿ ಗಣಪತಿ,ಚಂಡೇಶ್ವರ,ಕಡಲೆ ಮಾರುತಿ,ಕಬ್ಬುಮಾರುತಿ,ವೀರಭದ್ರ,ಸದಾಶಿವ,ಕದಂಬೇಶ್ವರ,ತಿಥಿಕಂಠೇಶ್ವರ ಗುಡಿಗಳಿವೆ.

ಮನ್ಮಹಾಸ್ಯಂದನ ರಥೋತ್ಸವ

ರಥೋತ್ಸವ ಬನವಾಸಿಯ ದೊಡ್ಡ ಹಬ್ಬಗಳಲ್ಲೊಂದು.ಕಳೆದ 380 ವರ್ಷಗಳಿಂದ ಪ್ರತಿ ವರ್ಷ ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಎರಡು ದಿನಗಳಂದು ರಥೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ.ಈ ಉತ್ಸವ ಶಿವಪಾರ್ವತಿಯರ ವಿವಾಹ ಮಹೋತ್ಸವವೂ ಹೌದು.ಇದರಲ್ಲಿ ಅತಿ ವಿಶೇಷವೆಂದರೆ ರಥದಲ್ಲಿ ಸಾಲಂಕೃತವಾದ ಮಧುಕೇಶ್ವರ,ಪಾರ್ವತಿ ಜೊತೆಗೆ ಗಣಪತಿ,ಸುಬ್ರಹ್ಮಣ್ಯರ ಉತ್ಸವಮೂರ್ತಿಗಳನ್ನು ಸ್ಥಾಪನೆ ಮಾಡಿ ದೀಪಾಲಂಕಾರಗಳೊಂದಿಗೆ ರಥವನ್ನು ಎಳೆಯಲಾಗುತ್ತದೆ.ಒಟ್ಟಾರೆ ಬನವಾಸಿಯಲ್ಲಿ 4 ರಥಗಳಿವೆ. 1. ಹಗಲೋತ್ಸವ ರಥ 2. ತಿರುಗುಣಿ ರಥ 3. ಹೂವಿನ ರಥ 4. ಶ್ರೀ ಮನ್ಮಹಾಸ್ಯಂದನ ರಥ ಶ್ರೀ ಮನ್ಮಹಾಸ್ಯಂದನ ರಥವನ್ನು ‘ದೊಡ್ಡ ತೇರು’ ಎಂದು ಕರೆಯಲಾಗುತ್ತದೆ.ಇದು ಭಾರತದ ಅತಿ ದೊಡ್ಡ ರಥಗಳಲ್ಲೊಂದು.ಇದನ್ನು ಸೋಂದೆಯ ಅರಸ ಶ್ರೀ ರಾಮಚಂದ್ರ ನಾಯಕ 1608 ರಲ್ಲಿ ಮಧುಕೇಶ್ವರ ಉತ್ಸವಕ್ಕೆಂದು ದಾನವಾಗಿ ನೀಡಿದನು.ರಥವು75 ಅಡಿ ಎತ್ತರವಿದ್ದು,ಸುಮಾರು150 ಟನ್ ತೂಕವಿದ್ದು 6 ಚಕ್ರಗಳನ್ನು ಹೊಂದಿದೆ.ಈ ರಥವು ಕರ್ನಾಟಕದ ಅತ್ಯಂತ ಹಳೆಯ ರಥಗಳಲ್ಲೊಂದಾಗಿದೆ(404 ವರ್ಷ)

ಮಧುಕೇಶ್ವರ ದೇವಸ್ಥಾನವನ್ನು ತಲುಪುವುದು ಹೇಗೆ?

ವಿಮಾನದ ಮೂಲಕ

250 ಕಿ.ಮೀ. ದೂರದಲ್ಲಿರುವ ಮಂಗಳೂರು ಹತ್ತಿರದ ವಿಮಾನ ನಿಲ್ದಾಣವಾಗಿದೆ. ಪ್ರವಾಸಿಗರು ಮಂಗಳೂರಿನಿಂದ ಬನವಾಸಿಗೆ ಬಸ್ ಅಥವಾ ಟ್ಯಾಕ್ಸಿ ಮೂಲಕ ಪ್ರಯಾಣಿಸಬಹುದು.

ರೈಲು ಮೂಲಕ

ಮಧುಕೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ಹತ್ತಿರದ ರೈಲು ನಿಲ್ದಾಣ ಶಿವಮೊಗ್ಗದಲ್ಲಿದೆ ಇದು 112 ಕಿ.ಮೀ ದೂರದಲ್ಲಿದೆ.

ರಸ್ತೆ ಮೂಲಕ

ಬನವಾಸಿಯಲ್ಲಿರುವ ಮಧುಕೇಶ್ವರ ದೇವಸ್ಥಾನವು ರಸ್ತೆಯ ಮೂಲಕ ಉತ್ತಮ ಸಂಪರ್ಕವನ್ನು ಹೊಂದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರು ಮತ್ತು ಬನವಾಸಿ ನಡುವೆ ನಿಯಮಿತವಾಗಿ ಬಸ್ಸುಗಳನ್ನು ಓಡಿಸುತ್ತದೆ. ಖಾಸಗಿ ಬಸ್ಸುಗಳು ಮತ್ತು ಟ್ಯಾಕ್ಸಿಗಳು ಸಹ ಲಭ್ಯವಿದೆ.

ShareTweetSendShare
Join us on:

Related Posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram