ನವದೆಹಲಿ : ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಪರ ಹಾಗೂ ವಿರೋಧವಾಗಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದೆ. ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದ್ದು, ಈಶಾನ್ಯ ದೆಹಲಿಯ ಮೌಜ್ ಪುರ, ಬಾಂದ್ ಬಾಗ್, ಜಫರಾಬಾದ್ ಅಕ್ಷರಶಃ ನಲುಗಿ ಹೋಗಿದೆ. ಈ ನಡುವೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಅಲ್ಲದೇ, ಕೇಂದ್ರ ಹಾಗೂ ದೆಹಲಿ ಸರ್ಕಾರಕ್ಕೆ ಪಂಚ ಪ್ರಶ್ನೆಗಳನ್ನು ಮುಂದಿಟ್ಟಿದೆ.
ದೆಹಲಿ ಗಲಭೆ ನಡೆಯುತ್ತಿದ್ದಾಗ ಕೇಂದ್ರದ ಗೃಹ ಸಚಿವರು ಎಲ್ಲಿದ್ದರು ಮತ್ತು ಕಳೆದ ಭಾನುವಾರದಿಂದ ಅವರು ಏನು ಮಾಡುತ್ತಿದ್ದರು?
ದೆಹಲಿಯಲ್ಲಿನ ಗಲಭೆ ಕುರಿತು ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಸಿಕ್ಕಿರಲಿಲ್ಲವೇ ?
ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ?
ಪರಿಸ್ಥಿತಿ ದೆಹಲಿ ಪೊಲೀಸರ ನಿಯಂತ್ರಣ ಮೀರಿದೆ ಎಂಬುದು ಸ್ಪಷ್ಟವಾದಾಗ ಹೆಚ್ಚುವರಿ ಭದ್ರತಾ ಪಡೆಗಳನ್ನು ತಕ್ಷಣವೇ ಕರೆಯಲಿಲ್ಲವೇಕೆ ?
ಘಟನೆ ನಡೆದಾಗ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಎಲ್ಲಿದ್ದರು ?
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ
ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...








