ನವದೆಹಲಿ: ಮಹಾಮಾರಿ ಕೊರೊನಾ ಹಾಗೂ ಲಾಕ್‍ಡೌನ್‍ನಿಂದ ಸಾಮಾನ್ಯ ಜನರ ಬದುಕು ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೆ ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆಗಳು ಹೆಚ್ಚುತ್ತಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಆದರೂ ತೈಲ ಬೆಲೆ ಮಾತ್ರ ಏರುತ್ತಲೇ ಹೋಗುತ್ತಿದೆ. ಕಳೆದ ತಿಂಗಳು ಬರೊಬ್ಬರಿ 23 ಬಾರಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಈಗ ಕಳೆದೊಂದು ವಾರದಲ್ಲಿ ಮೂರು ಬಾರಿ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.
ಕಳೆದ ಐದು ದಿನಗಳ ಹಿಂದೆ ಪ್ರತಿ ಲೀಟರ್ ಡೀಸೆಲ್‍ಗೆ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ನಿನ್ನೆ (ಜುಲೈ 12ರಂದು) ಮತ್ತೆ 16 ಪೈಸೆ ಬೆಲೆ ಏರಿಕೆ ಮಾಡಿದ್ದರೆ, ಇಂದು ಪ್ರತಿ ಲೀಟರ್ ಡೀಸೆಲ್ ಗೆ 11 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿ ಲೀಟರ್ ಡೀಸೆಲ್ ಬೆಲೆ 11.53 ರೂಪಾಯಿ ಹೆಚ್ಚಳವಾದಂತಾಗಿದೆ.
ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ಎಲ್ಲ ಕಡೆ ಸೋತ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಹರಣ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಕೋಲಾರ, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡದೆ ಎಲ್ಲ ಕಡೆ ಸೋಲುತ್ತಿದೆ. ಆದರೂ ಪ್ರಜಾಪ್ರಭುತ್ವವನ್ನು ಹರಣ ಮಾಡಲು ಇವಿಎಂ, ಎಸ್‌ಐಆರ್ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...








