DWCD Yadgiri Recruitment 2025 : ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಬ್ಲಾಕ್ ಕೋಆರ್ಡಿನೇಟರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಪದವಿ ಅರ್ಹತೆ ಹೊಂದಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ವೇತನ ನೀಡಲಾಗುತ್ತದೆ.
ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಸಲ್ಲಿಸಬೇಕಾದ ದಾಖಲೆಗಳು :
• ನಿಗದಿತ ನಮೂನೆಯಲ್ಲಿ ಅರ್ಜಿ.
• ಎಸ್.ಎಸ್.ಎಲ್.ಸಿ ಅಂಕ ಪಟ್ಟಿ.
• ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು.
• ಅನುಭವ ಪ್ರಮಾಣ ಪತ್ರಗಳು.
• ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.
• ತಹಸಿಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ.
ಅರ್ಜಿ ಸಲ್ಲಿಸುವ ವಿಳಾಸ : ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 17, 2025








