ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗುರು ರಾಘವೇಂದ್ರ ಬ್ಯಾಂಕಿನ ಮಯ್ಯ ಆತ್ಮಹತ್ಯೆ ಪ್ರಕರಣ ಹಿನ್ನೆಲೆ: ಸಿಐಡಿ & ಇಡಿಯಿಂದ ತನಿಖೆ ಚುರುಕು

admin by admin
July 13, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಗುರು ರಾಘವೇಂದ್ರ ಬ್ಯಾಂಕಿನ ಮಾಜಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ವಾಸುದೇವ ಮಯ್ಯ ಅವರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಬ್ಯಾಂಕಿನ ಅವ್ಯವಹಾರದ ಹಗರಣ ಇದೀಗ ಸಿಐಡಿ ಬಾಗಿಲಲ್ಲಿ ಬಂದು ನಿಂತಿದೆ. ಉನ್ನತ ಮೂಲಗಳ ಪ್ರಕಾರ, ಮಯ್ಯ ಶವ ಅವರ ಕಾರಿನಲ್ಲಿ ಪತ್ತೆಯಾಗಿತ್ತು. ಅವರ ಮಗಳು ರಶ್ಮಿ ಎಚ್.ಹೇಮ್ಲೆ ಅವರು ನೀಡಿರುವ ದೂರಿನ ಆಧಾರದಲ್ಲಿ ದಾಖಲಾಗಿರುವ ಎಫ್ಐಆರ್ ನಲ್ಲಿ ಉಲ್ಲೇಖವಾಗಿರುವ ಸಂತೋಷ್ ಕುಮಾರ್ ಎ ಮತ್ತು ಇತರೆ ನಿರ್ದೇಶಕರ ವಿಚಾರಣೆಯನ್ನು ಆರಂಭಿಸಲಾಗಿದೆ.

ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಹಾಲಿ ಸಿಇಒ ಸಂತೋಷ್ ಕುಮಾರ್ ಎ, ಇತರರಾದ ರಘುನಾಥ್, ರೆಡ್ಡಿ ಬ್ರದರ್ಸ್, ಎಸ್ಎಚ್ ಮೈನ್ಸ್, ರಜತ್, ಕುಮಾರೇಶ್, ತಲ್ಲಂ, ರವಿ ಐತಾಳ್, ರಾಕೇಶ್, ಶ್ರೀಪಾದ ಹೆಗಡೆ ಮತ್ತು ಪ್ರಶಾಂತ್ ಅವರು ತಮ್ಮ ತಂದೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಮಗಳು 2 ಜುಲೈ 2020 ರಂದು ದೂರು ನೀಡಿದ್ದರು.

Related posts

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

April 6, 2026
ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

April 6, 2026

ಮಯ್ಯ ಅವರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರಲ್ಲಿ, ತಾನು ಆತ್ಮಹತ್ಯೆಯಂತಹ ಕಠಿಣ ನಿರ್ಧಾರಕ್ಕೆ ಬರಲು ಎಂಟು ಮಂದಿ ಕಾರಣರು ಎಂದು ಬರೆದಿದ್ದರು. ಆಶ್ಚರ್ಯವೆಂದರೆ, ದೂರುದಾರರಿಂದ ಒತ್ತಡ ಇದ್ದಾಗ್ಯೂ ಪೊಲೀಸರು ಇದುವರೆಗೂ ಡೆತ್ ನೋಟ್ ಗೆ ಸಂಬಂಧಿಸಿದ ಯಾವುದೇ ವಿಚಾರಗಳನ್ನೂ ಬಹಿರಂಗಪಡಿಸಿಲ್ಲ.

ಪ್ರಕರಣದ ಗಂಭೀರತೆಯನ್ನು ಅರಿತ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಪ್ರಕರಣದ ತನಿಖೆಯನ್ನು ನಡೆಸುವಂತೆ ಸಿಐಡಿಗೆ ಆದೇಶ ನೀಡಿದ್ದಾರೆ. ಅದರಂತೆ ಸಿಇಒ ಸೇರಿದಂತೆ ಹನ್ನೊಂದು ಮಂದಿ ಆರೋಪಿಗಳ ವಿಚಾರಣೆಯನ್ನು ಸಿಐಡಿ ತೀವ್ರಗೊಳಿಸಿದೆ. ಈ ಹನ್ನೊಂದು ಜನರ ಪೈಕಿ ಸಂತೋಷ್ ಅವರು 7 ಫೆಬ್ರವರಿ 2020 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಮಯ್ಯ ವಿರುದ್ಧ ದೂರು ನೀಡಿದ್ದರು. ಸಾಲಕ್ಕೆ ಶಿಫಾರಸು ಮಾಡುವುದು, ಹಣ ಬಿಡುಗಡೆ, ಠೇವಣಿದಾರರ ಹಣವನ್ನು ಬಳಕೆ ಮಾಡುವುದು ಮತ್ತು ಎನ್ ಪಿಎ ಅಕೌಂಟ್ ಗಳನ್ನು ಅಡ್ಜಸ್ಟ್ ಮಾಡುವುದು ಸೇರಿದಂತೆ ಮಯ್ಯ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂತೋಷ್ ತಮ್ಮ ದೂರಿನಲ್ಲಿ ಆರೋಪಿಸಿದ್ದರು.
ಈ ಮೂಲಕ ಮಯ್ಯ ಅವರು ಠೇವಣಿದಾರರ ವಿಶ್ವಾಸಕ್ಕೆ ಕುಂದುಂಟಾಗುವ ರೀತಿಯಲ್ಲಿ ವಂಚನೆಗಳನ್ನು ಮಾಡಿದ್ದಾರೆ ಮತ್ತು ಕ್ರಿಮಿನಲ್ ಅಪರಾಧ ಎಸಗಿದ್ದಾರೆ ಎಂದು ಸಂತೋಷ್ ಆರೋಪಿಸಿದ್ದರು.

ಇದೀಗ ಪ್ರಕರಣದ ತನಿಖೆ ವೇಗವನ್ನು ಪಡೆದುಕೊಂಡಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಆದರೆ, ಇಷ್ಟೊಂದು ಪ್ರಮಾಣದ ಹಗರಣವನ್ನು ಒಬ್ಬನೇ ವ್ಯಕ್ತಿ ಮಾಡಲು ಸಾಧ್ಯವೇ? ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡತೊಡಗಿದೆ.
ಆಡಳಿತ ಮಂಡಳಿಯ ಅನುಮೋದನೆಯನ್ನು ಪಡೆದ ನಂತರವಷ್ಟೇ ನಮ್ಮ ತಂದೆ ಸಾಲದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಕೆಲವರು ತಮ್ಮ ತಂದೆಯ ಪಾಸ್ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಮತ್ತು ಬ್ಯಾಂಕಿಗೆ ತನಿಖೆಗಾಗಿ ಬಂದಿದ್ದ ಆರ್ ಬಿಐ ಅಧಿಕಾರಿಗಳು ಬಲವಂತವಾಗಿ ತಂದೆಯಿಂದ ಕೆಲವು ದಾಖಲೆಗಳಿಗೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ರಶ್ಮಿ ಆರೋಪಿಸಿದ್ದಾರೆ.
2012-18 ರ ಅವಧಿಯಲ್ಲಿ ಬ್ಯಾಂಕಿನಲ್ಲಿ 1400 ಕೋಟಿ ರೂಪಾಯಿ ವಂಚನೆ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇದಲ್ಲದೇ, 69 ಸಾಲಗಳಲ್ಲಿ 2876 ಖಾತೆಗಳಿಗೆ 1323 ಕೋಟಿ ರೂಪಾಯಿಗಳ ಸಾಲವನ್ನು ಮಂಜೂರು ಮಾಡಲಾಗಿದೆ ಎಂಬ ಆರೋಪವೂ ಇದೆ. ಈ ಭಾರೀ ಪ್ರಮಾಣದ ಅವ್ಯವಹಾರದ ಬಗ್ಗೆ ಗಮನಹರಿಸಿದ ಜಾರಿ ನಿರ್ದೇಶನಾಲಯವು ಇದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತೋಷ್ ಗೆ ಸಮನ್ಸ್ ನೀಡಿದೆ.

Tags: CID & EDGuru Raghavendra Bank
ShareTweetSendShare
Join us on:

Related Posts

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

by Shwetha
April 6, 2026
0

ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

by Shwetha
April 6, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಗುರಿಯಾಗಿಸಿ ಮಾಜಿ...

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

by Shwetha
April 6, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಪದೇ ಪದೇ...

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಓವೈಸಿ ತೀವ್ರ ವಿರೋಧ: ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ, ಸಂವಿಧಾನ ಉಲ್ಲಂಘನೆ ಎಂದು ವಾಗ್ದಾಳಿ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಓವೈಸಿ ತೀವ್ರ ವಿರೋಧ: ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ, ಸಂವಿಧಾನ ಉಲ್ಲಂಘನೆ ಎಂದು ವಾಗ್ದಾಳಿ

by Shwetha
April 6, 2026
0

ಗುಜರಾತ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲು ಮುಂದಾಗಿರುವ ಸರ್ಕಾರದ ನಡೆಯ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರ...

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 6, 2026
0

ದಿನ ಭವಿಷ್ಯ: 06-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಕಾರ್ಯವೈಖರಿಗೆ ಕಚೇರಿಯಲ್ಲಿ ಮೆಚ್ಚುಗೆ ವ್ಯಕ್ತವಾಗಲಿದೆ. ವ್ಯಾಪಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram